ಉಪ್ಪಿನಂಗಡಿ: ಪೆರಿಯಡ್ಕದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಸನ್ನಿಧಿಯಲ್ಲಿ ಫೆ.20ರಂದು 44ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.
ಸಂಜೆ ೫:೩೦ರಿಂದ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ರಾತ್ರಿ 8:30ರಿಂದ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅಧ್ಯಕ್ಷ ಸುರೇಶ್ ಗೌಂಡತ್ತಿಗೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಭಜನಾ ಮಂದಿರದ ಗೌರವ ಸಲಹೆಗಾರ ಶಂಕರನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಜಾಲ್ಸೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ ಎ. ಭಾಗವಹಿಸಲಿದ್ದು, ಈ ಸಂದರ್ಭ ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಕೆ. ಪುಷ್ಪವಲ್ಲಿ ಅವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಪೂಜಾ ಕಾರ್ಯಕ್ರಮ ಸಂಪನ್ನಗೊಂಡ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಇರಲ್ಲಿದ್ದು, ಯಕ್ಷ ಸಂಗಮ ಉಪ್ಪಿನಂಗಡಿ ಇವರ ಸಂಯೋಜನೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರ ತಂಡದಿಂದ“ಕೃಷ್ಣಲೀಲೆ- ಕಂಸವಧೆ” ಎಂಬ ಕಾಲಮಿತಿ ಯಕ್ಷಗಾನ ನಡೆಯಲಿದೆ