ಗ್ರಾಮಾಂತರ ಪ್ರಮುಖ ಸ್ಥಳೀಯ

ಮಾಲಾಡಿ: ಉಚಿತ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ಮತ್ತು ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಾಲಾಡಿ ಗ್ರಾ.ಪಂ ವ್ಯಾಪ್ತಿಯ ನಾಗರಿಕರಿಗೆ ಉಚಿತ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮವು ಎ.19 ರಂದು ಗ್ರಾ.ಪಂ.ಸಭಾಭವನದಲ್ಲಿ ಜರುಗಿತು.

ಮಾಲಾಡಿ ಗ್ರಾ.ಪಂ ಅಧಕ್ಷೆ ಬೇಬಿ ಸುಸ್ಸಾನ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಪ್ರೀಯಾರವರು ಕೋವಿಡ್ ಲಸಿಕೆ ತೆಗೆದುಕೊಳ್ಳುವುದರಿಂದ ಆಗುವ ಉಪಯೋಗ ಮತ್ತು ತೆಗೆದುಕೊಳ್ಳುವ ಸರಿಯಾದ ವಿಧಾನದ ಬಗ್ಗೆ ಮಾಲಾಡಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ವಾಣಿಶ್ರೀ, ತಾಲೂಕು ಆರೋಗ್ಯಾಧಿಕಾರಿ ಕಲಾಮಧು, ಗ್ರಾ.ಪಂ. ಉಪಾಧ್ಯಕ್ಷ ದಿನೇಶ್ ಡಿ ಕರ್ಕೇರಾ, ಪಂಚಾಯತ್ ಅಭಿವೃದ್ದಿ ಅಧಿಕಾರಿ ರಾಘವೇಂದ್ರ ಪಾಟೀಲ, ಕಾರ್ಯದರ್ಶಿ ಯಶೋಧರ ಶೆಟ್ಟಿ, ಹಾಗೂ ಗ್ರಾಮ ಪಂಚಾಯತದ ಸರ್ವಸದಸ್ಯರು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರಥಮವಾಗಿ ಮಾಲಾಡಿ ಗ್ರಾ.ಪಂ ಅಧ್ಯಕ್ಷೆ ಬೇಬಿ ಸುಸ್ಸಾನರವರು ಲಸಿಕೆ ಪಡೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಾಲಾಡಿ ಮತ್ತು ಸೋಣಂದೂರು ಗ್ರಾಮದ ಸುಮಾರು ೧೭೫ ಮಂದಿ ನಾಗರೀಕರು ಕೋವಿಡ್ ಲಸಿಕೆಯನ್ನು ಪಡೆದುಕೊಂಡರು.

Related posts

ಡಿ.27ಕ್ಕೆ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ದ.ಕ ಜಿಲ್ಲಾ ಭೇಟಿ

Upayuktha

ಕೊರೊನಾ ಆತಂಕ: ಬಂಟ್ವಾಳದ ಪೆಟ್ರೋಲ್ ಬಂಕ್ ಕಾರ್ಮಿಕ ಆತ್ಮಹತ್ಯೆಗೆ ಶರಣು

Upayuktha

ಬಪ್ಪನಾಡು ಕ್ಷೇತ್ರಕ್ಕೆ ಸ್ವರ್ಣ ಪಲ್ಲಕಿ ವೈಭವದ ಮೆರವಣಿಗೆ: ನಾಳೆ ದೇವಿಗೆ ಸಮರ್ಪಣೆ

Upayuktha