ಇತರ ಕ್ರೀಡೆಗಳು ಕ್ರೀಡೆ ಗ್ರಾಮಾಂತರ ಪ್ರಮುಖ ಸ್ಥಳೀಯ

ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಸಹಕಾರಿ: ವಂ| ಬೇಸಿಲ್ ವಾಸ್

ಮಡಂತ್ಯಾರು:  ಸೋಲು, ಗೆಲುವಿನ ಲೆಕ್ಕಾಚಾರ ಬೇಡ. ಕ್ರೀಡಾ ಸ್ಪೂರ್ತಿ ಗೆಲ್ಲಬೇಕು. ಸಾಮರಸ್ಯ, ಸ್ನೇಹಮಯ ವಾತಾವರಣ ನಿರ್ಮಾಣ ಕ್ರೀಡೆಯಿಂದ ಸಾಧ್ಯವಿದೆ ಎಂದು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಸಂಚಾಲಕರಾದ ವಂ| ಬೇಸಿಲ್ ವಾಸ್ ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಆಯೋಜಿಸಿದ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದ ಅವರು ದೈಹಿಕ, ಮಾನಸಿಕ ಕ್ಷ ಮತೆ ಹೆಚ್ಚಳಕ್ಕಾಗಿ ಕ್ರೀಡೆ ಸಹಕಾರಿ.

ವಿದ್ಯಾರ್ಥಿ ಜೀವನದಲ್ಲಿ ಪಾಲ್ಗೊಳ್ಳುವ ಕ್ರೀಡೆಗಳ ಮೂಲಕ ಭವಿಷ್ಯದಲ್ಲಿ ಆತ್ಮವಿಶ್ವಾಸದ ಬದುಕು ಕಟ್ಟಿಕೊಳ್ಳಬಹುದು. ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗಿದ್ದು, ಸ್ಪರ್ಧೆಯಲ್ಲಿ ಸೋಲು ಗೆಲವು ಸಾಮಾನ್ಯ. ಹಾಗಾಗಿ ಸ್ಪರ್ಧೆಯಲ್ಲಿ ಸೋತವರನ್ನು ಪ್ರೋತ್ಸಾಹಿಸಬೇಕೇ ಹೊರತು ಹಿಯಾಳಿಸಬಾರದು ಎಂದು ಕ್ರೀಡಾಪಟುಗಳನ್ನು ಹುರಿದುಂಬಿಸಿದರು.

ಈ ವೇಳೆ ಮಡಂತ್ಯಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ ಕಾರ್ಯದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೋಮ್ ಡಿಸೋಜ ಸ್ವಾಗತಿಸಿ, ಉಪನ್ಯಾಸಕರಾದ ರೆನಿಶಾ ವೇಗಸ್ ವಂದಿಸಿ, ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇನ್ನು ಪಂದ್ಯಾಟದಲ್ಲಿ ತಾಲೂಕಿನ ಬಾಲಕ – ಬಾಲಕಿಯರ ಒಟ್ಟು ಹನ್ನೊಂದು ತಂಡಗಳು ಭಾಗ ವಹಿಸಿದ್ದು, ಬಾಲಕರ ವಿಭಾಗದಲ್ಲಿ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಪ್ರಥಮ ,ವಾಣಿ ಪ.ಪೂ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.

ಬಾಲಕಿಯರ ವಿಭಾಗದಲ್ಲಿ ವಾಣಿ ಪ.ಪೂ ಕಾಲೇಜು ಪ್ರಥಮ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು. ಸಮಾರೋಪ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೋಮ್ ಡಿಸೋಜ ಬಹುಮಾನ ವಿತರಿಸಿದರು.

 

Related posts

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ವಿಜ್ಞಾನ ಮೇಳ

Upayuktha

ರಾಮಾಯಣ ಮಾಸಾಚರಣೆ: ಮಾ.8ಕ್ಕೆ ಬದಿಯಡ್ಕ ಸಂಸ್ಕೃತಿ ಭವನದಲ್ಲಿಪೂರ್ವಭಾವಿ ಸಭೆ

Upayuktha

ಮಧ್ಯಾಹ್ನದ ವರೆಗಿನ ಅಪ್‌ಡೇಟ್ಸ್: ರಾಜ್ಯದಲ್ಲಿ ಇಂದು 10 ಕೊರೊನಾ ಪಾಸಿಟಿವ್

Upayuktha