ಮಂಗಳೂರು: ಕರ್ನಾಟಕ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನಿರ್ದೇಶನಾಲಯದ ಆರ್ಥಿಕ ಬೆಂಬಲದಲ್ಲಿ ಟೆಕ್ಸಾಕ್ ಸಂಸ್ಥೆಯು ಜಿಲ್ಲಾ ಕೈಗಾರಿಕಾ ಕೇಂದ್ರ, ದ.ಕ, ಮಂಗಳೂರು ಅವರ ಸಹಯೋಗದಲ್ಲಿ ಫೆಬ್ರವರಿ 2020 – ಜೂನ್ 2020 ರ ಅವಧಿಯಲ್ಲಿ ಹತ್ತು ದಿವಸಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮಗಳನ್ನು ಸಂಯೋಜಿಸಲು ಪ್ರಸ್ತಾಪಿಸಿದೆ.
ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳಿಗೆ ಸ್ವ- ಉದ್ಯಮಗಳನ್ನು ಸ್ಥಾಪಿಸಲು ಬೇಕಾದ ಅರಿವು ಮತ್ತು ಆತ್ಮಸ್ಥೈರ್ಯವನ್ನು ನೀಡುವ ಉದ್ದೇಶ ಹೊಂದಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನವಾಗಿರುತ್ತದೆ.
ಅರ್ಜಿ ನಮೂನೆಯನ್ನು ಕಚೇರಿ ವೇಳೆಯಲ್ಲಿ ಪಡೆದುಕೊಳ್ಳಬಹುದು. ಇದಲ್ಲದೆ ಟೆಕ್ಸಾಕಿನ ವೆಬ್ಸೈಟ್ (www.tecsok.com)ನಲ್ಲಿ ವಿವರಗಳನ್ನು ಪಡೆದು ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕ ವಿವೇಕಾನಂದ ಜಿ. ದೂರವಾಣಿ ಸಂ. 0824-2214021 ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
(ಉಪಯುಕ್ತ ನ್ಯೂಸ್)
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ