ಗ್ರಾಮಾಂತರ ಸ್ಥಳೀಯ

ಜೀವನಕ್ಕಾಗಿ ವ್ಯವಹಾರ ಇರಲಿ, ವ್ಯವಹಾರಕ್ಕಾಗಿ ಜೀವನ ಬೇಡ: ಎ.ವಿ. ಶೆಟ್ಟಿ

ಉಜಿರೆ: ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ ಸಮಾರಂಭವು ರುಡ್‍ಸೆಟ್ ಸಂಸ್ಥೆಯಲ್ಲಿ ನಡೆಯಿತು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿಯಾದ ಎ.ವಿ, ಶೆಟ್ಟಿಯವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸುತ್ತಾ ಜೀವನಕ್ಕಾಗಿ ವ್ಯವಹಾರ ಇರಲಿ ವ್ಯವಹಾರಕ್ಕಾಗಿ ಜೀವನ ಬೇಡ ಉದ್ಯಮದಲ್ಲಿ ಸವಾಲುಗಳು ಬಂದಾಗ ಮುನ್ನುಗ್ಗುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ ಎಂದು ಹಿತವಚನ ನೀಡಿದರು.

ರುಡ್‍ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಎಂ. ಜನಾರ್ದನ್‍ರವರು ಅಧ್ಯಕ್ಷೀಯ ಮಾತುಗಳನ್ನಾಡಿ ಪ್ರಾಮಾಣಿಕವಾಗಿ ವ್ಯವಹರಿಸಿ ಎಂದರು.

ನಿರ್ದೇಶಕರಾದ ಪಡದಯ್ಯ ಹಿರೇಮಠ್‍ರವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ಅನಸೂಯ ವಂದಿಸಿದರು.

13 ದಿನಗಳ ಈ ಕಾರ್ಯಕ್ರಮದಲ್ಲಿ 22 ಶಿಬಿರಾರ್ಥಿಗಳು ಭಾಗವಹಿಸಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ

Sushmitha Jain

ಸಂಪನ್ಮೂಲಗಳ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಡಾ|| ಚೂಂತಾರು

Upayuktha

ಆಳ್ವಾಸ್ ವಿದ್ಯಾರ್ಥಿಗಳ ಮಾದರಿ ಕಾರ್ಯಕ್ರಮ: ಜಲಸಂರಕ್ಷಣೆಗೆ ಸಾಂಪ್ರದಾಯಿಕ ಕಟ್ಟಗಳ ನಿರ್ಮಾಣ

Upayuktha