
ಔರಂಗಾಬಾದ್: ರೈಲ್ವೇ ಹಳಿಗಳ ಮೇಲೆ ಮಲಗಿ ನಿದ್ರಿಸುತ್ತಿದ್ದ 16 ಮಂದಿ ವಲಸಿಗರ ಕಾರ್ಮಿಕರು ರೈಲು ಅಪಘಾತದಲ್ಲಿ ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಗಢೇಜಲಗಾಂವ್ ಗ್ರಾಮದಲ್ಲಿ ನಡೆದಿದೆ.
ನಾಂದೇಡ್ನಿಂದ ಮುಂಬಯಿಗೆ ಪೆಟ್ರೋಲ್ ಮತ್ತು ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲು ಈ ಕಾರ್ಮಿಕರ ಮೇಲೆ ಹಾದು ಹೋಗಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಇನ್ನೂ ಐವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಿನ ಜಾವ 5:30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಈ ವಲಸೆ ಕಾರ್ಮಿಕರು ಪಕ್ಕದ ಝಲ್ನಾ ಜಿಲ್ಲೆಯ ಬೃಹತ್ ಉಕ್ಕು ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದವರು ಎಂದು ಮೂಲಗಳು ತಿಳಿಸಿವೆ.
Extremely anguished by the loss of lives due to the rail accident in Aurangabad, Maharashtra. Have spoken to Railway Minister Shri Piyush Goyal and he is closely monitoring the situation. All possible assistance required is being provided.
— Narendra Modi (@narendramodi) May 8, 2020
ದುರಂತದ ಸುದ್ದಿ ತಿಳಿದು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಔರಂಗಾಬಾದ್ನ ಕಾರ್ಮಾಡ್ನಲ್ಲಿ ಗೂಡ್ಸ್ ರೈಲಿನ ಖಾಲಿ ವ್ಯಾಗನ್ಗಳು ಹಳಿಯಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಚಲಿಸಿದೆ. ರೈಲ್ವೇ ರಕ್ಷಣಾ ದಳ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣೆ ಮತ್ತು ಪರಿಹಾರ ಕಾರ್ಯ ಕೈಗೊಂಡಿದ್ದಾರೆ ಎಂದು ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದರು.
ಔರಂಗಾಬಾದ್ ನಿಂದ ಮಧ್ಯಪ್ರದೇಶಕ್ಕೆ ಹೋಗುವ ರೈಲಿನ ಮೂಲಕ ಉತ್ತರ ಭಾರತದ ವಿವಿಧ ರಾಜ್ಯಗಳ ತಮ್ಮ ಊರುಗಳಿಗೆ ಸೇರಿಕೊಳ್ಳುವ ಉದ್ದೇಶದಿಂದ ಈ ಕಾರ್ಮಿಕರು ಹಳಿಗಳ ಮೇಲೆ ನಡೆದುಕೊಂಡು ಹೊರಟಿದ್ದರು. ರಸ್ತೆಯಲ್ಲಿ ಹೋದರೆ ಪೊಲೀಸರು ತಡೆಯುತ್ತಾರೆ ಎಂಬ ಕಾರಣಕ್ಕೆ ರೈಲು ಹಳಿಗಳ ಮೇಲೆ ನಡೆಯುತ್ತ ರಾತ್ರಿ ವೇಳೆ ಹಳಿಯ ಮೇಲೆಯೇ ಮಲಗಿ ನಿದ್ರಿಸುತ್ತಿದ್ದರು. ಅವರ ಮೇಲೆ ಈ ಸರಕು ರೈಲು ಚಲಿಸಿದೆ ಎಂದು ತಿಳಿದು ಬಂದಿದೆ.
(ಉಪಯುಕ್ತ ನ್ಯೂಸ್)
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ