ಕ್ಷೇತ್ರಗಳ ವಿಶೇಷ ಗ್ರಾಮಾಂತರ ಸ್ಥಳೀಯ

ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 29ಕ್ಕೆ

ಪ್ರಾತಿನಿಧಿಕ ಚಿತ್ರ (ಫೈಲ್ ಫೋಟೋ)

ಧರ್ಮಸ್ಥಳ: ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹವನ್ನು ಏಪ್ರಿಲ್ 29, ಗುರುವಾರದಂದು ಸಂಜೆ 6.48ಕ್ಕೆ ಗೋಧೋಳಿ ಲಗ್ನದಲ್ಲಿ ಆಯೋಜಿಸಲಾಗಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12,262 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 25ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, 8147263422, 9663464648.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ದ.ಕ.ದಲ್ಲಿ ಒಂದು ಕೊರೊನಾ ಪಾಸಿಟಿವ್; ಉಡುಪಿ, ಕಾಸರಗೋಡಿನಲ್ಲಿ ಹೊಸ ಪ್ರಕರಣ ಇಲ್ಲ

Upayuktha

ಪುತ್ತೂರು: “ಕಲೆಕ್ಷನ್ ಅಫ್ ಥಾಟ್ ಫಾರ್ ದಿ ಡೇ” ಅನಾವರಣ

Upayuktha

ಹೊಸ ವಿಷಯಗಳನ್ನು ಕಲಿಯುವ ತುಡಿತ ಪ್ರತಿಯೊಬ್ಬ ಅಧ್ಯಾಪಕನಲ್ಲೂ ಇರಬೇಕು: ವತ್ಸಲಾರಾಜ್ಞಿ

Upayuktha