ಕ್ಷೇತ್ರಗಳ ವಿಶೇಷ

ಅಯೋಧ್ಯೆ ಭೂಮಿ ಪೂಜೆಗೆ ಕರ್ನಾಟಕ ದ 8 ಮಂದಿಗೆ ಆಹ್ವಾನ

 

ಬೆಂಗಳೂರು: ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರ್ಜರಿಯಾಗಿ ನಡೆಯುತ್ತಿದ್ದು, ಆಯೋಧ್ಯೆಯ ಶ್ರೀ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಎಂಟು ಮಂದಿಯನ್ನು ವಿಶೇಷ ಆಹ್ವಾನ ನೀಡಲಾಗಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಕರ್ನಾಟಕ ಕ್ಕೆ ಎಂಟು ಮಂದಿಗೆ ವಿಶೇಷವಾಗಿ ಆಹ್ವಾನ ನೀಡಲಾಗಿದ್ದು ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದೆ. ಈ ಶುಭ ಸಂದರ್ಭಕ್ಕೆ ಅಯೋಧ್ಯೆ ಸಿಂಗಾರಗೊಂಡಿದೆ.

ವಿಶೇಷ ಆಹ್ವಾನಿತರಾದ
1. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
2. ಇಸ್ಕಾನ್ ನ ಮಧುಪಂಡಿತ ದಾಸ್
3. ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ
4. ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ
5. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
6. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ
7. ಸುತ್ತೂರು ಮಠದ ಶ್ರೀಗಳು
8. ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ

 

ವಿಶೇಷ ವ್ಯಕ್ತಿ ಗಳಾದ 8 ಮಂದಿಯನ್ನು ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಯ ಐತಿಹಾಸಿಕ ಕ್ಷಣಕ್ಕಾಗಿ ರಾಮ ಮಂದಿರ ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸುತ್ತಿದೆ. ಪುರುಷೋತ್ತಮ ರಾಮನ ಮಂದಿರಕ್ಕಾಗಿ ಅಯೋಧ್ಯೆ ಭರ್ಜರಿಯಾಗಿ ಅಲಂಕೃತಗೊಂಡಿದೆ. ಭಾರೀ ಭದ್ರತೆಯನ್ನು ಸಹ ಕೈಗೊಳ್ಳಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಸ್ವಲ್ಪ ಜಾಗರೂಕತೆಯಿಂದ ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಮಾಡಲಾಗಿದೆ.

Related posts

ಮೇಕೇರಿ: ಶ್ರೀ ಗೌರೀಶಂಕರ ದೇವಾಲಯದಲ್ಲಿ ದಶದಿನಗಳ ಅಖಂಡ ಶಿವಾರಾಧನೆ, ಮಹಾಶಿವರಾತ್ರಿ ಉತ್ಸವ

Upayuktha

ಇಂದಿನಿಂದ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಮುಕ್ತ ಅವಕಾಶ

Upayuktha

ಸೂರ್ಯಗ್ರಹಣ: ಗೋಕರ್ಣದಲ್ಲಿ ವಿಶೇಷ ಪೂಜೆ

Upayuktha

Leave a Comment

error: Copying Content is Prohibited !!