ದೇಶ-ವಿದೇಶ ನಿಧನ ಸುದ್ದಿ

ಕೇರಳದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಅಧಿಕಾರಿ ಬಲಿ

,

ತಿರುವನಂತಪುರಂ: ರಾಜ್ಯದಲ್ಲಿ ದಿನೇ ದಿನೇ ಹರಡುತ್ತಿರುವ ಕೊರೋನಾ ಸೋಂಕಿಗೆ ಮೊದಲ ಪೋಲಿಸ್ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಇಡುಕ್ಕಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಬ್ ಇನ್ಸ್ ಪೆಕ್ಟರ್ ಕೊರೋನಾ  ವೈರಸ್ ಗೆ ಬಲಿಯಾಗಿದ್ದಾರೆ.

ಸುಮಾರು 55 ವರ್ಷ ಪ್ರಾಯದ ಪೊಲೀಸ್ ಅಧಿಕಾರಿಗೆ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಬಳಿಕ ಅವರನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜು  ಆಸ್ಪತ್ರೆಗೆ ದಾಖಲಿಸಿದ್ದು ಸೋಂಕು ತಗುಲಿರುವುದು ವರದಿಯಾಗಿತ್ತು.

ಇವರು ಆಗಸ್ಟ್ 1 ರಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಸಾವನಪ್ಪಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿಗೆ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಕೊರೋನಾ ವಾರಿಯರ್ಸ್ ಗಳಾದ 20 ಜನ ಆರೋಗ್ಯ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಚೀನಾದ ಸರಕಾರಿ ಬೆಂಬಲಿತ ಅಕೌಂಟ್‌ಗಳನ್ನು ಕಿತ್ತುಹಾಕಿದ ಫೇಸ್‌ಬುಕ್, ಟ್ವಿಟರ್

Upayuktha

ಪೆರ್ನೆಯ ಕೃಷಿಕ ಭೀಮ ಭಟ್ ನಿಧನ – ಮೃತರ ದೇಹ ದಾನ

Harshitha Harish

ಲಡಾಖ್‌ನಲ್ಲಿ ಚೀನಾ ಜತೆ ಗಡಿ ಸಂಘರ್ಷ: 20 ಭಾರತೀಯ ಯೋಧರು ಹುತಾತ್ಮ, 43 ಚೀನೀ ಸೈನಿಕರು ಹತ

Upayuktha