ಬೆಂಗಳೂರು: ನಗರದ ಕೆಂಗೇರಿಯ ಬಳಿ ಪೊಲೀಸ್ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಸುಜಾತ ಎಂದು ಗುರುತಿಸಲಾಗಿದ್ದು. ಇಂದು ಬೆಳಗ್ಗೆ ಕೆಂಗೇರಿ ಪೊಲೀಸ್ ಕ್ವಾರ್ಟರ್ಸ್ ಬಳಿ ಬಂದಿದ್ದ ಅವರು 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಸುಜಾತಾರವರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎನ್ನಲಾಗಿದೆ.
ಅವರು 9 ವರ್ಷಗಳ ಹಿಂದೆ ವಿವಾಹವಾಗಿದ್ದರು. ಎರಡು ಮಕ್ಕಳಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.