ಜಿಲ್ಲಾ ಸುದ್ದಿಗಳು

ನಿರ್ಬಂಧಗಳನ್ನು ಪಾಲಿಸುತ್ತಲೇ ಹಬ್ಬಗಳನ್ನು ಆಚರಿಸೋಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ: ಕೊರೊನಾ ಮಹಾಮಾರಿಯ ಆರ್ಭಟ ದಿನೇದಿನೇ ಏರುತ್ತಿದ್ದರೂ, ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ‘ಜೀವ ಮತ್ತು ಜೀವನ’ ಎರಡನ್ನೂ ಸರಿದೂಗಿಸುವ ಪ್ರಯತ್ನವಾಗಿ ಸರಕಾರ ಪುಣ್ಯ ಕ್ಷೇತ್ರಗಳ ದರ್ಶನ ಮತ್ತು ಧಾರ್ಮಿಕ ವಿಧಿವಿಧಾನಗಳ ಆಚರಣೆಗೆ ನಿರ್ಬಂಧಗಳಲ್ಲಿ ಒಂದಷ್ಟು ರಿಯಾಯಿತಿಗಳನ್ನು ಪ್ರಕಟಿಸಿದೆ.

ಈ ಹಿನ್ನೆಲೆಯಲ್ಲಿ ಮೈಮರೆಯದೆ ನಾವು ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುತ್ತ, ಆಚರಣೆಗಳನ್ನು ಮಾಡೋಣ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ.

ಸಾಲು ಹಬ್ಬಗಳ ಹಿನ್ನಲೆಯಲ್ಲಿ ಕೋವಿಡ್ 19 ರ ನಿರ್ಬಂಧಗಳನ್ನು ಒಂದಷ್ಟು ಸಡಿಲಿಸಿ ಸರಕಾರ ಪುಣ್ಯಕ್ಷೇತ್ರಗಳ ದರ್ಶನ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲು ಅವಕಾಶ ಮಾಡಿಕೊಟ್ಟಿದೆ. ಹಾಗಂತ ನಾವು ಮೈಮರೆಯುವಂತಿಲ್ಲ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದೇ ಮೊದಲಾದ ಸರಕಾರದ ಎಲ್ಲ ಮಾರ್ಗಸೂಚಿಗಳನ್ನು ಅವಶ್ಯವಾಗಿ ಪಾಲಿಸಬೇಕು. ಕೊರೊನಾ ಮಾರಿಯಿಂದ ದೇಶವನ್ನು ಮುಕ್ತಗೊಳಿಸಲು ಕೆಲವು ಸ್ವಯಂ ನಿರ್ಬಂಧಗಳನ್ನು ಅನುಸರಿಸಿಕೊಂಡು ಕ್ಷೇತ್ರದರ್ಶನ ಹಾಗೂ ಧಾರ್ಮಿಕ ಕಾರ್ಯಗಳನ್ನು ನಡೆಸಿ ಕೊರೊನಾ ಮುಕ್ತಿಗಾಗಿ, ಲೋಕದ ಒಳಿತಿಗಾಗಿ ವಿಶೇಷವಾಗಿ ಪ್ರಾರ್ಥಿಸಬೇಕು. ಆರೋಗ್ಯಪೂರ್ಣ ಸಮಾಜ ನಿರ್ಮಾಣ ಕೇವಲ‌ ಸರ್ಕಾರದ ಹೊಣೆಯಲ್ಲ; ಎಲ್ಲರ ಕರ್ತವ್ಯ ಎಂದು ಅವರು ಹೇಳಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಇಂದಿನಿಂದ ಅಂತರ್ ರಾಜ್ಯ ಸಂಚಾರ: ಕಾಸರಗೋಡು ಜಿಲ್ಲಾಧಿಕಾರಿಯವರ ಮಹತ್ವದ ಆದೇಶ

Upayuktha

ಬ್ರಹ್ಮಕಲಶೋತ್ಸವವನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಆದೇಶ

Upayuktha

ಯುವ ಜನತೆಯ ಭವಿಷ್ಯಕ್ಕೆ ಮಾರಕವಾದ ಡ್ರಗ್ಸ್ ವಿರುದ್ಧ ಶುರುವಾಗಿದೆ ಸಮರ

Upayuktha News Network