ಬೆಂಗಳೂರು : ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಶರಣ್ ಭಾನುವಾರ ಡಿಸ್ಚಾರ್ಜ್ ಆಗಿದ್ದಾರೆ.
“ಅವತಾರ ಪುರುಷ” ಸಿನಿಮಾ ಚಿತ್ರೀಕರಣದ ವೇಳೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆ ನಟ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಇದೀಗ ಚಿಕಿತ್ಸೆ ಪಡೆದು ಗುಣಮುಖರಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಮನೆಗೆ ವಾಪಾಸಾಗಿದ್ದಾರೆ.
ಕಿಡ್ನಿಯಲ್ಲಿ ಕಲ್ಲು ಪತ್ತೆಯಾಗಿದ್ದು ಮೂರು ದಿನ ವಿಶ್ರಾಂತಿಗೆ ಸೂಚಿಸಿದ್ದಾರೆ. ಹೊಟ್ಟೆ ನೋವು ಕಡಿಮೆಯಾಗದೆ ಹೋದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಬೇಕಿದೆ ಎಂದು ಶರಣ್ ಅವರ ಸೋದರಿ ನಟಿ ಶ್ರುತಿ ಮಾಹಿತಿ ನೀಡಿದ್ದಾರೆ.