ದೇಶ-ವಿದೇಶ

ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನಟಿ ಖುಷ್ಬೂ ಪೊಲೀಸ್ ವಶಕ್ಕೆ

ಚೆನ್ನೈ: ಕೆಲ ವಾರಗಳ ಹಿಂದೆಯಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಅವರನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.

ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ಅವರು ಮನುಸ್ಮೃತಿ ಉಲ್ಲೇಖಿಸಿ ಹಿಂದೂ ಮಹಿಳೆಯರ ಬಗ್ಗೆ ಕೀಳಾಗಿ ಆಡಿದ್ದರು ಎನ್ನಲಾದ ಮಾತುಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರು. ಹೀಗಿರುವಾಗ ಖುಷ್ಬೂ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

‘ಬಂಧನಕ್ಕೆ ಒಳಗಾಗಿದ್ದೇನೆ.. ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ಯಲಾಗುತ್ತಿದೆ. ಮಹಿಳೆಯರ ಗೌರವಕ್ಕಾಗಿ ನಮ್ಮ ಕೊನೆ ಉಸಿರಿನವರೆಗೂ ಹೋರಾಡುತ್ತೇವೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ. ನಾವು ಅವರ ಹಾದಿಯಲ್ಲಿ ಸಾಗುತ್ತಿದ್ದೇವೆ. ಕೆಲವು ಕೆಟ್ಟ ವ್ಯಕ್ತಿಗಳ ದೌರ್ಜನ್ಯಕ್ಕೆ ನಾವು ಮಂಡಿಯೂರುವುದಿಲ್ಲ. ಭಾರತ್ ಮಾತಾ ಕಿ ಜೈ’ ಎಂದು ಖುಷ್ಬೂ ಟ್ವೀಟ್ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಯಾಗುವ ಸಾಧ್ಯತೆಯನ್ನು ಅರಿತ ಪೊಲೀಸರು ಮುತ್ತಕಾಡು ಎಂಬಲ್ಲಿ ಖೂಷ್ಬು ಅವರ ಕಾರು ತಡೆದು ಅನುಮತಿ ಪತ್ರ ಕೇಳಿದ್ದಾರೆ. ಇನ್ನು ಅನುಮತಿ ಇಲ್ಲವೆಂದು ಖುಷ್ಬು ಹೇಳಿದಾಗ ಅವರನ್ನು ಹಾಗೂ ಅವರ ಜೊತೆ ಬಂದಿದ್ದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು‌ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ.

ಹಾಗೆಯೇ ಮುಂಜಾಗ್ರತಾ ಕ್ರಮವಾಗಿ ನಟಿ ಖುಷ್ಬೂ ಸೇರಿದಂತೆ ಹಲವು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು‌ ಬಂದಿದೆ.

Related posts

ಯುಇಎಫ್ಎ ವರ್ಷದ ಆಟಗಾರ ಪ್ರಶಸ್ತಿ ಗೆದ್ದ ರಾಬರ್ಟ್ ಲೆವಾಂಡೋವ್ಸ್ಕಿ

Upayuktha

ವಾಜಪೇಯಿಯವರ 2ನೇ ವರ್ಷದ ಪುಣ್ಯ ಸ್ಮರಣೆ- ರಾಷ್ಟ್ರಪತಿ, ಪ್ರಧಾನಿಯಿಂದ ನಮನ

Harshitha Harish

ಚುನಾವಣೆಗೆ ಮುನ್ನವೇ ಮಹಾರಾಷ್ಟ್ರ, ಹರ್ಯಾಣ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

Upayuktha

Leave a Comment