ಚಂದನವನ- ಸ್ಯಾಂಡಲ್‌ವುಡ್

ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ಕಛೇರಿ ಹಾಜರು

ಬೆಂಗಳೂರು: ಯುವರಾಜ್ ಸ್ವಾಮಿ ವಂಚನೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ ಕಾರಣ ನಟಿ ರಾಧಿಕಾ ಕುಮಾರಸ್ವಾಮಿಯವರು ಶುಕ್ರವಾರ ವಿಚಾರಣೆಗೆ ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ.

ರಾಜ್ಯಪಾಲರನ್ನಾಗಿ ಮಾಡುತ್ತೇನೆ ಎಂದೆಲ್ಲಾ ಹೇಳಿ ಹಲವರಿಂದ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಿ ಯುವರಾಜ್ ಸ್ವಾಮಿಯನ್ನು ಕೆಲ ದಿನಗಳ ಹಿಂದಷ್ಟೇ ಬಂಧನಕ್ಕೊಳಪಡಿಸಲಾಗಿತ್ತು.

ಆರೋಪಿ ಯುವರಾಜ್ ಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದ ವೇಳೆ ಆತನ ಖಾತೆಯಿಂದ ರಾಧಿಕಾ ಕುಮಾರಸ್ವಾಮಿ ಖಾತೆಗೆ ಲಕ್ಷಾಂತರ ಹಣ ಸಂದಾಯವಾಗಿರುವುದು ತಿಳಿದುಬಂದಿತ್ತು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್‌ ಅವರ ವಿಚಾರಣೆ ನಡೆಸಿರುವ ಸಿಸಿಬಿ. ರಾಧಿಕಾ ಕುಮಾರಸ್ವಾಮಿ ಅವರಿಗೂ ನಿನ್ನೆಯಷ್ಟೇ ಸಮನ್ಸ್ ಮಾಡಿತ್ತು.

 

Related posts

ಚೊಚ್ಚಲ ಸಿನಿಮಾದ ಮೂಲಕ ಟಾಲಿವುಡ್ ಗೆ ಕಾಲಿಟ್ಟ ನಟ ಚೇತನ್

Harshitha Harish

ಕಿಚ್ಚ ಸುದೀಪ್ ರವರ ಬಹು ನಿರೀಕ್ಷಿತ ಚಿತ್ರ ಪ್ಯಾಂಟಮ್ ಚಿತ್ರದ ಶೀರ್ಷಿಕೆ ವಿಕ್ರಾಂತ್ ರೋಣ ಎಂದು ಬದಲಾವಣೆ

Harshitha Harish

ನಟ ರಾಘವೇಂದ್ರ ರಾಜ್ ಕುಮಾರ್ ಆಸ್ಪತ್ರೆ ಯಿಂದ ಡಿಸ್ಚಾರ್ಜ್

Harshitha Harish