ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಫೆ. 29, ಮಾ.2, 3ರಂದು ವಿವೇಕಾನಂದ ಕಾಲೇಜಿನ ವಾರ್ಷಿಕೋತ್ಸವ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ವಿವೇಕಾನಂದ ಮಹಾವಿದ್ಯಾಲಯದ ಸಪ್ತಪರ್ಣೋತ್ಸವ ದಿನ, ಕಾಲೇಜು ವಾರ್ಷಿಕೋತ್ಸವ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ದಿನಾಚರಣೆಯು ಫೆ. 29, ಮಾ. 2 ಮತ್ತು 3 ರಂದು ಕಾಲೇಜು ಆವರಣದ ಬಯಲು ರಂಗಮಂಟಪದಲ್ಲಿ ನಡೆಯಲಿದೆ.

ಸಪ್ತಪರ್ಣೋತ್ಸವ ದಿನ
ಫೆ. 29 ರಂದು ಸಪ್ತಪರ್ಣೋತ್ಸವ ದಿನ ನಡೆಯಲಿದ್ದು ಆ ದಿನ ವಾರ್ಷಿಕೋತ್ಸವ ಪ್ರಯುಕ್ತ ನಡೆಸಿದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ. ಬೆಳಗ್ಗೆ 10ರಿಂದ ಸಭಾಕಾರ್ಯಕ್ರಮ ನಡೆಯಲಿದ್ದು, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಶ್ರೀನಿವಾಸ ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಆಗಮಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿರಲಿದ್ದಾರೆ. ಮಧ್ಯಾಹ್ನ 12 ರಿಂದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ವಾರ್ಷಿಕೋತ್ಸವ
ಮಾ. 2ರಂದು ಬೆಳಗ್ಗೆ 9ಕ್ಕೆ ವಾರ್ಷಿಕೋತ್ಸವದ ಪ್ರಯುಕ್ತ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದಯವಾಣಿ ಮಂಗಳೂರು ವಿಭಾಗದ ಸಹಾಯಕ ಸಂಪಾದಕ ಮನೋಹರ ಪ್ರಸಾದ್ ಆಗಮಿಸಲಿದ್ದಾರೆ. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಹಿರಿಯ ವಿದ್ಯಾರ್ಥಿಗಳ ಸಂಘದ ದಿನಾಚರಣೆ
ಮಾ. 3 ರಂದು ಹಿರಿಯ ವಿದ್ಯಾರ್ಥಿಗಳ ಸಂಘದ ದಿನಾಚರಣೆ ನಡೆಯಲಿದ್ದು, ಬೆಳಗ್ಗೆ 9.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರೊ. ತಾಳ್ತಜೆ ವಸಂತ ಕುಮಾರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿಯ ವಿಶ್ರಾಂತ ಪ್ರಾಚಾರ್ಯ ಡಾ. ಪಾದೆಕಲ್ಲು ವಿಷ್ಣು ಭಟ್ಟ, ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಮುರಳೀಕೃಷ್ಣ ಕೆ.ಎನ್. ಚಳ್ಳಂಗಾರು ಆಗಮಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಶ್ರೀನಿವಾಸ ಪೈ ಉಪಸ್ಥಿತರಿರಲಿದ್ದಾರೆ. ಪೆರ್ಲದ ನಾಲಂದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವಿಘ್ನೇಶ್ವರ ವರ್ಮುಡಿ ಅಭಿನಂದನಾ ಭಾಷಣ ಮಾಡಲಿದ್ದಾರೆ.

ಗೌರವಾರ್ಪಣೆ
ಹಿರಿಯ ವಿದ್ಯಾರ್ಥಿಗಳ ದಿನಾಚರಣೆಯಂದು ಕಾಲೇಜಿನ ವಿಶ್ರಾಂತ ಪ್ರಾಚಾರ್ಯರಾದ ಪ್ರೊ. ಬಿ. ಜನಾರ್ದನ ಭಟ್, ಪ್ರೊ. ಕೆ.ಆರ್. ರವಿರಾವ್, ಪ್ರೊ. ಎ.ವಿ. ನಾರಾಯಣ ಅವರಿಗೆ ಗೌರವಾರ್ಪಣೆ ನಡೆಯಲಿದೆ. ಹಿರಿಯ ವಿದ್ಯಾರ್ಥಿಗಳಾದ ಕನ್ಯಾನ ಭಾರತ ಸೇವಾಶ್ರಮದ ಎಸ್. ಈಶ್ವರ ಭಟ್ಟ, ಸಿಂಡಿಕೇಟ್ ಬ್ಯಾಂಕ್ ವಿಶ್ರಾಂತ ಆಫೀಸರ್ ಹಾಗೂ ರಾಷ್ಟ್ರೀಯ ವೈಟ್ ಲಿಫ್ಟರ್ ದಿವಾಕರ ಶೆಟ್ಟಿ, ಯಕ್ಷಗಾನ ಭಾಗವತೆ ಕಾವ್ಯಶ್ರೀ ಅಜೇರು ಅವರಿಗೂ ಗೌರವಾರ್ಪಣೆ ನಡೆಯಲಿದೆ. ಅಪರಾಹ್ನ 2 ರಿಂದ ಹಿರಿಯ ವಿದ್ಯಾರ್ಥಿಗಳಿಂದ ‘ಹಿರಣ್ಯಾಕ್ಷ’ ಯಕ್ಷಗಾನ ಬಯಲಾಟ ನಡೆಯಲಿದೆ.

ಈ ಸಂದರ್ಭ ಕಾಲೇಜಿನ ಆಡಳಿತ ಮಂಡಳಿಯ ಹಿರಿಯರಾದ ಗುಣಪಾಲ ಜೈನ್ ಕೆ., ಜನಾರ್ದನ ಭಟ್ ಎಸ್., ಶೋಭಾ ಕೊಳತ್ತಾಯ ಎನ್., ಉಷಾ ನಾಯಕ್, ರಮಾನಾಥ ಶೆಣೈ ಎಂ., ಕೃಷ್ಣ ನಾೈಕ್ ಎ., ಅನಂತಕೃಷ್ಣ ನಾಯಕ್, ಪ್ರಾಚಾರ್ಯ ಪ್ರೊ. ವಿ.ಜಿ. ಭಟ್, ವಿದ್ಯಾರ್ಥಿ ಕ್ಷೇಮಪಾಲಕರಾದ ಪ್ರೊ. ಕೃಷ್ಣ ಕಾರಂತ ಕೆ., ಬಿ. ಅತುಲ್ ಶೆಣೈ, ಮೋತಿ ಬಾೈ ಕೆ. ಎನ್., ವಿಜಯಲಕ್ಷ್ಮಿ, ವಾಸುದೇವ ಎನ್., ಡಾ. ವಿಜಯಸರಸ್ವತಿ, ಡಾ. ಕಾರಂತ ವಿಜಯ ಗಣಪತಿ, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯೆ ಸರಸ್ವತಿ ಸಿ.ಕೆ., ವಿದ್ಯಾರ್ಥಿ ನಾಯಕರಾದ ಸ್ವಸ್ತಿಕ್ ಕೆ.ಆರ್., ನಿಶಾಂತ್, ಲಿಖಿತಾ ವಿ.ಕೆ., ಹಾಗೂ ಹಿರಿಯ ವಿದ್ಯಾರ್ಥಿಗಳು, ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ಕಾಲೇಜಿನ ಪ್ರಕಟನೆ ತಿಳಿಸಿದೆ.

 

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಕದ್ರಿ ಪಾರ್ಕ್‌ನಲ್ಲಿ ಜ.1ರಿಂದ ಫಲಪುಷ್ಪ ಪ್ರದರ್ಶನ, ವಿವಿಧ ಸ್ಪರ್ಧೆಗಳು

Upayuktha

ಬಜ್ಪೆ: ಶನೈಶ್ಚರ ದೇವಳದಲ್ಲಿ ಎಲ್ಲ ಸೇವೆ, ಸಾರ್ವಜನಿಕ ದರ್ಶನ ಸ್ಥಗಿತ

Upayuktha

ಪರ್ಸ್ ಮರಳಿಸಿ ಪ್ರಾಮಾಣಿಕತೆ ಮೆರೆದ ಗೃಹರಕ್ಷಕ ಸಿಬ್ಬಂದಿ ಜಯರಾಮ

Upayuktha