ನವದೆಹಲಿ : ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಜನವರಿ 11 ರ ಮಧ್ಯಾಹ್ನ ಹೆಣ್ಣು ಮಗುವಿಗೆ ಅನುಷ್ಕಾ ಜನ್ಮ ನೀಡಿದ್ದಾರೆ ಎಂದು ವಿರಾಟ್ ಕೊಹ್ಲಿ ಸಂತಸ ಹಂಚಿಕೊಂಡಿದ್ದಾರೆ.
ಈ ಕುರಿತು ಪೋಸ್ಟ್ ಹಾಕಿರುವ ವಿರಾಟ್ ಕೊಹ್ಲಿ, ”ನಾವು ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ ಎಂದು ಹೇಳಲು ಬಹಳ ಖುಷಿಯಾಗುತ್ತಿದೆ. ಅನುಷ್ಕಾ ಮತ್ತು ಮಗುವಿನ ಬಗ್ಗೆ ಪ್ರಾರ್ಥಿಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು, ಅನುಷ್ಕಾ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ.
ಇಂತಹ ಸಮಯದಲ್ಲಿ ನಮ್ಮ ಖಾಸಗಿತನವನ್ನು ನೀವು ಗೌರವಿಸುತ್ತೀರಾ ಎಂದು ಬಯಸಿದ್ದೇನೆ” ಎಂದು ಕೊಹ್ಲಿ ಪೋಸ್ಟ್ ಹಾಕಿದ್ದಾರೆ.
ಅನುಷ್ಕಾ ಮತ್ತು ಕೊಹ್ಲಿ ಅಭಿಮಾನಿಗಳು ಈ ಸುದ್ದಿ ತಿಳಿಯುತ್ತಿದ್ದಂತೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ. 2021ನೇ ವರ್ಷದ ಆರಂಭದಲ್ಲಿ ಒಳ್ಳೆಯ ಸುದ್ದಿ ಎಂದು ಶುಭಾಶಯ ತಿಳಿಸುತ್ತಿದ್ದಾರೆ.