ರಾಜ್ಯ

ಧರ್ಮಸ್ಥಳದಲ್ಲಿ ಮತ್ಸ್ಯ ಪ್ರದರ್ಶನಾಲಯ ಉದ್ಘಾಟನೆ

ಉಜಿರೆ: ಮೀನುಗಾರಿಕೆಯಲ್ಲಿ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಲಲಿತೋದ್ಯಾನದಲ್ಲಿ ಮತ್ಸ್ಯ ಪ್ರದರ್ಶನಾಲಯ ಉದ್ಘಾಟಿಸಿ ಮಾತನಾಡಿದರು.

ರಾಜ್ಯವು ಒಳನಾಡು ಮೀನುಗಾರಿಕೆಯಲ್ಲಿ ದೇಶದಲ್ಲಿ 9ನೇ ಸ್ಥಾನದಲ್ಲಿ ಹಾಗೂ ಕಡಲ ಮೀನುಗಾರಿಕೆಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರ ಮೂರೂವರೆ ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ್ದು ಉಳ್ಳಾಲದಿಂದ ಕಾರವಾರ ತನಕ ಕಡಲಕಿನಾರೆಯಲ್ಲಿ ಮೀನು ಸಂಪಾದನೆಗೆ ಆದ್ಯತೆ ನೀಡಲಾಗುವುದು ಎಂದರು. ಈಗಾಗಲೇ ಮೀನಿನ ಚಿಪ್ಸ್ ಗೆ ಭಾರಿ ಬೇಡಿಕೆಯಿದೆ ಎಂದು ಸಚಿವರು ತಿಳಿಸಿದರು.

ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ ಪ್ರಾಣಿ- ಪಕ್ಷಿಗಳನ್ನು ಪ್ರೀತಿಯಿಂದ ಸಾಕುವುದರಿಂದ ನಮ್ಮ ಮಾನಸಿಕ ಒತ್ತಡಗಳು ದೂರವಾಗುತ್ತವೆ. ಅಲಂಕಾರಿಕ ಮೀನುಗಳನ್ನು ಕೆರೆ, ನದಿ, ಸಮುದ್ರದಲ್ಲಿ ನೋಡಲು ಸಾಧ್ಯವಿಲ್ಲ. ಮೀನು ಸಾಕುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಶಾಸಕರಾದ ಹರೀಶ್ ಪೂಂಜ ಮತ್ತು ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು. ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.ಡಾ. ಬಿ.ಯಶೋವರ್ಮ ಧನ್ಯವಾದವಿತ್ತರು. ಉಪನ್ಯಾಸಕ ದೀಕ್ಷಿತ್ ಕಾರ್ಯಕ್ರಮ ನಿರ್ವಹಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಲಾಕ್‍ಡೌನ್ ನಡುವೆ ರಂಜಿಸುತ್ತಿರುವ ‘ನೃತ್ಯಾಂಟೈನ್’: ಆಳ್ವಾಸ್‌ ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ಹೊಸ ಪ್ರಯೋಗ

Upayuktha

ಕೊರೊನಾ ನಿರ್ಬಂಧ ಹಿನ್ನೆಲೆ: ವಿವಿವಿ ವಿದ್ಯಾಂಕುರ ಮುಂದೂಡಿಕೆ

Upayuktha

ಟೈನಿ ಟೋನ್‌: ಖ್ಯಾತ ಗಾಯಕ ರಮೇಶ್ಚಂದ್ರ ಅವರಿಂದ ಹೊಸ ಗಾಯನ ಪ್ರತಿಭೆಗಳ ಅನಾವರಣ ಅ.3ಕ್ಕೆ

Upayuktha

Leave a Comment