ರಾಜ್ಯ

ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ

ಬೆಂಗಳೂರು: ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಸಿರುವ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷದ ರಾಜ್ಯ ಉಪಾದ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅಧಿಯಲ್ಲಿ ತಮಗೆ ಸಲಹೆ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಎಡನೀರು ಮಠಕ್ಕೆ ನೂತನ ಯತಿ: ಕಂಚಿ ಶ್ರೀಗಳಿಂದ ಸನ್ಯಾಸದೀಕ್ಷೆ ಸ್ವೀಕರಿಸಿದ ಶ್ರೀ ಜಯರಾಮ ಮಂಜತ್ತಾಯರು

Upayuktha News Network

ಖಾಸಗಿ ಬ್ಯಾಂಕುಗಳಿಂದ ಎದುರಾಗುವ ಸಮಸ್ಯೆ ಪರಿಹರಿಸಲು ಸರ್ಕಾರ ಸಿದ್ಧ: ಕೋಟಾ ಶ್ರೀನಿವಾಸ ಪೂಜಾರಿ

Upayuktha

ಡಾ.ಮೀರಾ ಕುಮಾರ್‌ಗೆ ಕರ್ನಾಟಕ ಲಲಿತಕಲಾ ಅಕಾಡೆಮಿಯ ಗೌರವ ಪ್ರಶಸ್ತಿ

Upayuktha