ಕ್ಷೇತ್ರಗಳ ವಿಶೇಷ ದೇಶ-ವಿದೇಶ

ಅಯೋಧ್ಯೆ: ರಾಮ ಮಂದಿರ ಭೂಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಅಯೋಧ್ಯೆ: ಈಗಾಗಲೇ ಭರದ ಸಿದ್ಧತೆಯಲ್ಲಿ ನಡೆಯುತ್ತಿರುವ ರಾಮ ಮಂದಿರದ ಇದೇ ಆಗಸ್ಟ್ 5 ರಂದು ಅಯೋಧ್ಯೆಯ ರಾಮ ಜನ್ಮಭೂಮಿ ಯಲ್ಲಿ ಭವ್ಯ ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಲಿದ್ದು, ಪ್ರಧಾನಿ ಮೋದಿ ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಮಯದಲ್ಲಿ ಭೂಮಿ ಪೂಜೆಗೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಆಮಂತ್ರಣ ಪತ್ರಿಕೆಯನ್ನು ಪ್ರಕಟಿಸಿದ್ದು, ಕೇಸರಿ ಬಣ್ಣದಲ್ಲಿದೆ.

ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್‌ ಮುಖ್ಯಸ್ಥ ಡಾ. ಮೋಹನ್ ಭಾಗವತ್, ಉತ್ತರಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರಿದೆ. ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಈ ನಾಲ್ವರು ಗಣ್ಯರ ಜೊತೆಗೆ ಮಹಾಂತ್ ನೃತ್ಯ ಗೋಪಾಲ್‌ದಾಸ್ ಸೇರಿ ಒಟ್ಟು ಐವರು ಗಣ್ಯರು ಮಾತ್ರ ವೇದಿಕೆ ಮೇಲೆ ಉಪಸ್ಥಿತಲಿರಲಿದ್ದಾರೆ. ಪ್ರಧಾನಿ ಮೋದಿ ಅವರಿಂದ ಭೂಮಿ ಪೂಜೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.

ಭೂಮಿ ಪೂಜೆಯ ಮೊದಲ ಆಮಂತ್ರಣ ಪತ್ರಿಕೆ ಅಯೋಧ್ಯೆ ಪ್ರಕರಣದ ಮೊದಲ ಮುಸ್ಲಿಂ ದಾವೆದಾರ ಇಕ್ಬಾಲ್ ಅನ್ಸಾರಿ ಅವರಿಗೆ ತಲುಪಿಸಲಾಗಿದ್ದು, ಉಳಿದ 150 ಆಮಂತ್ರಿತ ಗಣ್ಯರಿಗೂ ಆಮಂತ್ರಣ ಪತ್ರಿಕೆಯನ್ನು ತಲುಪಿಸಲಾಗಿದೆ. ಎಂದು ತಿಳಿಸಿದ್ದಾರೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Related posts

ಪಂಜಾಬಿ ಸಾಹಿತಿ ಅಮೃತಾ ಪ್ರೀತಂ ಜನ್ಮ ಶತಮಾನೋತ್ಸವಕ್ಕೆ ಗೂಗಲ್‌ನಿಂದ ವಿಶೇಷ ಡೂಡಲ್‌

Upayuktha

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೋವಿಡ್ ದೃಢ

Harshitha Harish

ಯಾವುದೇ ಕ್ಷಣ ಉಗ್ರರ ನೆಲೆ ನಾಶಕ್ಕೆ ಸಿದ್ಧ: ಪಾಕ್‌ಗೆ ಸೇನಾ ಮುಖ್ಯಸ್ಥರ ವಾರ್ನಿಂಗ್

Upayuktha

Leave a Comment

error: Copying Content is Prohibited !!