ರಾಜ್ಯ

ಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸ: ಧರ್ಮಸ್ಥಳ ಧರ್ಮಾಧಿಕಾರಿಗಳ ಶುಭ ಸಂದೇಶ

ಧರ್ಮಸ್ಥಳ: ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮ ಭವ್ಯ ಮಂದಿರ ನಿರ್ಮಾಣಕ್ಕೆ ನಾಳೆ ನಡೆಯಲಿರುವ ಶಿಲಾನ್ಯಾಸ ಸಮಾರಂಭದಲ್ಲಿ ಹಾಜರಾಗಲು ಆಹ್ವಾನ ಪಡೆದಿರುವ ಕನ್ನಡಿಗ ಗಣ್ಯರಲ್ಲಿ ಒಬ್ಬರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಈ ಬಗ್ಗೆ ಸಂದೇಶ ನೀಡಿದ್ದಾರೆ.

ಅವರ ಸಂದೇಶದ ಪೂರ್ಣ ಪಾಠ ಇಲ್ಲಿದೆ:

ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ಇಂದು (ಆಗಸ್ಟ್ 5) ನೆರವೇರಲಿರುವುದು ಭಾರತೀಯರೆಲ್ಲರಿಗೂ ಶುಭ ಸುದ್ದಿ. ಶ್ರೀರಾಮ ಭಗವಂತನ ಅವತಾರವೆಂದು ಭಾರತೀಯರ ನಂಬಿಕೆ, ಶ್ರದ್ಧೆ. ಆತ ಭೂಮಿಯಲ್ಲಿ ಅವತರಿಸಿದ ಬಳಿಕ ತನ್ನ ಸದ್ಗುಣಗಳಿಂದ ಆದರ್ಶಮೂರ್ತಿ ಎನಿಸಿದ. ಸಹಸ್ರಾರು ವರ್ಷಗಳಿಂದ ಮರ್ಯಾದ ಪುರುಷೋತ್ತಮನೆನಿಸಿ ತನ್ನ ವ್ಯಕ್ತಿತ್ವ, ದೃಢ ನಿರ್ಧಾರಗಳಿಂದಾಗಿ ಜನಮಾನಸದಲ್ಲಿ ನೆಲೆಯಾದ. ತನ್ನ ಆದರ್ಶಗಳಿಂದ ವಿಶ್ವವ್ಯಾಪಿಯಾದ.

ಆಧುನಿಕ ಜಗತ್ತಿನ ಭೌತಿಕ ಪ್ರಗತಿಯ ಮಧ್ಯೆಯೂ ರಮಾನಂದಸಾಗರರ ‘ರಾಮಾಯಣ’ ದೂರದರ್ಶನದಲ್ಲಿ ಪ್ರಸಾರವಾದಾಗ ಜನರು ಈ ರಾಮಕತೆಯಿಂದ, ರಾಮನ ಆದರ್ಶಗಳಿಂದ ಆಕರ್ಷಿತವಾಗಿರುವುದನ್ನು ಕಂಡರೆ ಶ್ರೀರಾಮ ಸ್ಮರಣೆ ಇನ್ನೂ ಸಹಸ್ರ ವರ್ಷಗಳವರೆಗೆ ಈ ನೆಲದಲ್ಲಿ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಎಂಬುದು ಸತ್ಯ.

ರಾಮರಾಜ್ಯದ ಕಲ್ಪನೆಗೆ ಕೇಂದ್ರವಾಗಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಅತೀ ಅಗತ್ಯ. ಈ ಶಿಲಾನ್ಯಾಸದ ಶುಭ ಮುಹೂರ್ತದಲ್ಲಿ ಪ್ರಾರಂಭವಾಗಿರುವ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನೆರವೇರಲೆಂದು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸುತ್ತೇನೆ.

ಕೆಲವೇ ತಿಂಗಳ ಹಿಂದೆ ಅಯೋಧ್ಯೆಗೆ ಹೋಗಿ ಪವಿತ್ರ ಭೂ ಸ್ಪರ್ಶ ಮಾಡಿ ಹಿರಿಯ ಸಂತರಿಗೆ ಗೌರವ ಸಲ್ಲಿಸಿ ಬಂದಿದ್ದೇನೆ. ಈ ಸಾಧನೆಗೆ ಸಂಕಲ್ಪ ಮಾಡಿದ ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲಾ ಶ್ರದ್ಧಾಳುಗಳಿಗೂ ಅಭಿನಂದನೆಗಳು.

ಡಿ. ವೀರೇಂದ್ರ ಹೆಗ್ಗಡೆಯವರು

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಐ-ಲೇಸಾ ತಂಡದಿಂದ 101 ತುಳು ಭಾವಗೀತೆಗಳ ಪುಸ್ತಕ ಪ್ರಕಟಣೆಗಾಗಿ ಗೀತೆಗಳಿಗೆ ಆಹ್ವಾನ

Upayuktha

ಜ್ಯೋತಿಷರತ್ನ ವಳಕ್ಕುಂಜ ವೆಂಕಟರಮಣ ಭಟ್ಟರಿಗೆ ವಿದ್ವತ್ ಪ್ರಶಸ್ತಿ

Upayuktha News Network

ರಾಜ್ಯದಲ್ಲಿಂದು ಒಟ್ಟು 67 ಹೊಸ ಕೊರೊನಾ ಕೇಸ್

Upayuktha

Leave a Comment

error: Copying Content is Prohibited !!