ನಗರ ಸ್ಥಳೀಯ

ಪತ್ರಕರ್ತರಿಗೆ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್‌ಗೆ ನೋಂದಣಿ ಶಿಬಿರಕ್ಕೆ ಚಾಲನೆ

ಮಂಗಳೂರು: ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಸರಕಾರದ ಪ್ರಮುಖ ಯೋಜನೆಯಾದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಸೌಲಭ್ಯವನ್ನು ಸಮಾಜದ ಎಲ್ಲಾ ಜನರಿಗೆ ಒದಗಿಸಬೇಕು ಮತ್ತು ಈ ಮಾಹಿತಿ ಎಲ್ಲರಿಗೂ ತಲುಪಬೇಕಾಗಿದೆ ಎಂದು ದ.ಕ ರೆಡ್ ಕ್ರಾಸ್ ಚೆಯರ್ಮನ್ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.

ಫೆ.22ರಿಂದ 24ರವರೆಗೆ ಮಂಗಳೂರು ಪತ್ರಿಕಾಭವನದಲ್ಲಿ ಹಮ್ಮಿಕೊಂಡ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ‌ಗೆ ನೋಂದಣಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಬಿ.ಎನ್. ಪುಷ್ಪರಾಜ್, ವಾರ್ತಾ ಇಲಾಖೆಯ ದೀಪಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಬೆಂಗಳೂರು ನಂದಿನಿ ಲೇಔಟ್‌ನಲ್ಲಿ ನ.17ಕ್ಕೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Upayuktha

ಉಡುಪಿ ಕರಂಬಳ್ಳಿಯಲ್ಲಿ ಆಚಾರ್ಯ ಶಂಕರ, ರಾಮಾನುಜರ ಸಂಸ್ಮರಣೆ

Upayuktha

ಉಪ್ಪಿನಂಗಡಿ ಗೃಹರಕ್ಷಕದಳ ಘಟಕದ 4 ಗೃಹರಕ್ಷಕರಿಗೆ ಪದೋನ್ನತಿ

Upayuktha