ಗ್ರಾಮಾಂತರ ನಗರ ಸ್ಥಳೀಯ

ಬೆಳ್ತಂಗಡಿ: ತಾಲೂಕು ಮಟ್ಟದ ಜಲಶಕ್ತಿ ಅಭಿಯಾನ ಉದ್ಘಾಟನೆ

ಉಜಿರೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮ ಪಂಚಾಯತ್ ಉಜಿರೆ, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ  ತಾಲೂಕು ಮಟ್ಟದ ಜಲಶಕ್ತಿ ಅಭಿಯಾನದ ಉದ್ಘಾಟನೆ ಹಾಗೂ ಮಾಹಿತಿ ಕಾರ್ಯಾಗಾರ ಏ.20ರಂದು ಉಜಿರೆ ಶಾರದಾ ಮಂಟಪದಲ್ಲಿ ಜರಗಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಉಜಿರೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಪರಿಷತ್ ಶಾಸಕ ಕೆ ಪ್ರತಾಪಸಿಂಹ ನಾಯಕ್, ಜಿಲ್ಲಾ ಪಂಚಾಯತ್ ಸದಸ್ಯರಗಳಾದ ಕೊರಗಪ್ಪ ನಾಯ್ಕ, ಮಮತಾ ಎಂ ಶೆಟ್ಟಿ ಸೌಮ್ಯಲತಾ ಜಯಂತ್, ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು ಉಪಸ್ಥಿತರಿದ್ದರು.

 

Related posts

ಭಾರೀ ಗಾಳಿ ಮಳೆ: ಕಾಸರಗೋಡು ಉಪಜಿಲ್ಲಾ ಕಲೋತ್ಸವದ ಪೆಂಡಾಲ್‌ ಕುಸಿತ, ಅದೃಷ್ಟವಶಾತ್‌ ತಪ್ಪಿದ ದುರಂತ

Upayuktha

ಉಪ್ಪಿನಂಗಡಿ: ನಾಳೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Sushmitha Jain

ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿನಲ್ಲಿ ಇ-ಸ್ಟಾಂಪಿಂಗ್ ಆರಂಭ

Upayuktha