ರಾಜ್ಯ ವಾಣಿಜ್ಯ

‘ಬೆಂಗಳೂರು ಉತ್ಸವ: ‘ ದೀಪಾವಳಿ ದೀಪಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ

  • ಅಕ್ಟೋಬರ್‌ 11 ರಿಂದ 20 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜನೆ

ಬೆಂಗಳೂರು: ದೀಪಗಳ ಹಬ್ಬ ದೀಪಾವಳಿ. ದೇಶದ ಎಲ್ಲಾ ಭಾಗಗಳಲ್ಲೂ ಆಚರಿಸಲ್ಪಡುವ ಈ ಹಬ್ಬಕ್ಕೆ ಭಾರತೀಯರ ಜೀವನದಲ್ಲಿ ಬಹಳ ಮಹತ್ವಪೂರ್ಣವಾದ ಸ್ಥಾನವಿದೆ. ಅದರಲ್ಲೂ ಅಂಧಕಾರವನ್ನು ಹೋಗಲಾಡಿಸುವ ದೀಪಗಳಿಗೆ ಅವುಗಳದೇ ಆದ ವೈಶಿಷ್ಟ್ಯತೆ ಇದೆ.

ದೇಶದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಆಚರಿಸಲ್ಪಡುವ ಈ ಹಬ್ಬದ ಕೇಂದ್ರ ಬಿಂದು ದೀಪಗಳು. ನಗರದ ಜನರಿಗೆ ದೇಶದ ವಿವಿಧ ಭಾಗದ ವೈವಿಧ್ಯಮಯ ದೀಪಗಳನ್ನು ಪ್ರದರ್ಶಿಸಬೇಕು ಹಾಗೂ ಅವುಗಳನ್ನು ಕೊಳ್ಳುವ ಅವಕಾಶ ನೀಡುವ ಉದ್ದೇಶದಿಂದ ಅಕ್ಟೋಬರ್‌ 11 ರಿಂದ 20 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ದೀಪಾವಳಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ.

ವೈವಿಧ್ಯಮಯ ದೀಪಗಳು:
ಈ ಬಾರಿಯ ಈ ಉತ್ಸವದಲ್ಲಿ ದೀಪಗಳ ಪ್ರಮುಖ ಆಕರ್ಷಣೆಯಾಗಿರಲಿವೆ. ವೈವಿಧ್ಯಮಯ ಮಣ್ಣಿನ ದೀಪಗಳೂ, ಲೋಹದ ದೀಪಗಳು, ತರಹೇವಾರಿ ಲೈಟಿಂಗ್‌ ಆಯ್ಕೆಗಳ ಶ್ರೇಣಿ ಇಲ್ಲಿರಲಿದೆ. ದೇಶದ ಎಲ್ಲಾ ಭಾಗಗಳಿಂದ ಆಗಮಿಸಿದ ಕರಕುಶಲಕಾರರು ತಯಾರಿಸಿದ ವಿಭಿನ್ನ ರೀತಿಯ ದೀಪಗಳ ಪ್ರದರ್ಶನ ಇಲ್ಲಿರಲಿದೆ.

ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ತರೇವಾರಿ ದೀಪಗಳು. ಈ ಬಾರಿ ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಹಾಗೂ ವಿಭಿನ್ನ ದೀಪಗಳನ್ನು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ.

100 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ.

ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ.

ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಅಕ್ಟೋಬರ್ 1‌1 ರಿಂದ ಅಕ್ಟೋಬರ್‌ 20 ರ ವರೆಗೆ ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಈ ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ. ಗ್ರಾಂಡ್‌ ಫ್ಲಿಯಾ ಆಯೋಜಿಸಿರುವ ಈ ಮೇಳದ ಪ್ರಮುಖ ಉದ್ದೇಶ ಕುಶಲಕರ್ಮಿಗಳನ್ನು ಉತ್ತೇಜಿಸಿ ಅವರಿಗೊಂದು ಮಾರುಕಟ್ಟೆ ಕಲ್ಪಿಸುವುದಾಗಿದೆ.

Related posts

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಡಾ ಪಿ ಎಸ್ ಹರ್ಷ ಅಧಿಕಾರ ಸ್ವೀಕಾರ

Upayuktha

ಮೈಸೂರು; ರಿಂಗ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; 2 ಮಂದಿ ಸಾವು 2 ಮಂದಿಗೆ ಗಾಯ

Harshitha Harish

ಇಂದಿನ ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ (27-08-2020)

Upayuktha