ಬದಿಯಡ್ಕ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2020ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಹರ್ಷಿತಾ ಎನ್. ಬದಿಯಡ್ಕ ಹಾಗೂ ರೂಪಾ ಕನಕಪ್ಪಾಡಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಪ್ರತಿಭಾನ್ವಿತರಾದ ಇವರು ವೈಷ್ಣವಿ ನಾಟ್ಯಾಲಯದ ನೃತ್ಯ ನಿರ್ದೇಶಕಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಇವರ ಶಿಷ್ಯೆಯರು.
ಬದಿಯಡ್ಕದ ಭಾಸ್ಕರ ಎನ್. ಮತ್ತು ರಾಜೇಶ್ವರಿ ದಂಪತಿಯ ಪುತ್ರಿ ಹರ್ಷಿತಾ ಎನ್. ಮಂಗಳೂರಿನ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸಯನ್ಸ್ ಕಾಲೇಜಿನಲ್ಲಿ ಮಾಸ್ಟರ್ ಇನ್ ಹಾಸ್ಪಿಟಲ್ ಎಡ್ಮಿನಿಸ್ಟ್ರೇಶನ್ ವಿದ್ಯಾರ್ಥಿನಿಯಾಗಿದ್ದಾರೆ.
ಕನಕಪ್ಪಾಡಿಯ ಉದಯಶಂಕರ ಭಟ್ ಮತ್ತು ಸುಗುಣ ದಂಪತಿಗಳ ಪುತ್ರಿ ರೂಪಾ ಪುತ್ತೂರು ವಿವೇಕಾನಂದ ಕಾಲೇಜಿನ ಎಂ.ಕಾಂ. ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ