ಪ್ರಮುಖ ರಾಜ್ಯ

ಮುಂದಿನ ಅಧಿವೇಶನದಲ್ಲೇ ಗೋಹತ್ಯೆ ನಿಷೇಧ ಮಸೂದೆ ಮಂಡನೆ : ಸಚಿವ ಪ್ರಭು ಚವ್ಹಾಣ್

ಸಾಮಾಜಿಕ ಜಾಲತಾಣದಲ್ಲಿ ಗೋ ಪ್ರೇಮಿಗಳು ನಡೆಸುತ್ತಿರುವ ಅಭಿಯಾನಕ್ಕೆ ಸರ್ಕಾರದ ಸ್ಪಂದನೆ

ಬೆಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಒತ್ತಾಯಿಸಿ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಗೋಪ್ರೇಮಿಗಳು ವ್ಯಾಪಕವಾಗಿ ನಡೆಸುತ್ತಿರುವ ಅಭಿಯಾನಕ್ಕೆ ಸರ್ಕಾರ ಸ್ಪಂದಿಸಿದೆ.

ಡಿಸೆಂಬರ್ 7 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಮಂಡನೆ ಮಾಡಲಿದ್ದು ಅದಕ್ಕೆ ಬೇಕಾದ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಈ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಕೂಡಾ ಚರ್ಚೆ ನಡೆಸಲಾಗಿದೆ ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.

ಪಶುಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು.  ಅದೀಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಸಚಿವ ಪ್ರಭು ಚೌಹಾಣ್ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಬಲವಾದ ಕಾಯ್ದೆ

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವ ಬೇರೆ ಬೇರೆ ರಾಜ್ಯಗಳಲ್ಲಿ ಅನುಷ್ಠಾನಗೊಂಡ ಕಾಯ್ದೆಯ ಅಧ್ಯಯನ ನಡೆಸಲಾಗಿದ್ದು ಈ ಬಗ್ಗೆ ಇಲಾಖಾ ಅಧಿಕಾರಿಗಳ ಮಟ್ಟದಲ್ಲಿ ಹಾಗೂ ಪರಿಣಿತರೊಂದಿಗೆ ಚರ್ಚೆ ಮಾಡಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಗೋಹತ್ಯೆ ನಿಷೇಧ ಕಾಯ್ದೆ ಹೆಚ್ಚು ಬಲವಾಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಇನ್ನು ಮುಂದೆ ಗೋಹತ್ಯೆ ನಿಷೇಧವಾಗಲಿದ್ದು ರಾಜ್ಯದ ಒಳಗೂ ಮತ್ತು ಹೊರಗೂ ಗೋಮಾಂಸ ಆಮದು ಮತ್ತು ರಫ್ತು ಸಂಪೂರ್ಣ ನಿಷೇಧ ಆಗಲಿದೆ.

ಕರ್ನಾಟಕ ಗೋ ಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964 ಯ ಬದಲಾಗಿ, “ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2010 ಅನ್ನು 2010 ರಲ್ಲಿ ಅಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ವಿಧಾನಮಂಡಲದಲ್ಲಿ ಮಂಡಿಸಿದ ನಂತರ ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು. ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ಅದನ್ನು ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಿದ್ದರಿಂದ ಕಾಯ್ದೆಯ ಅನುಷ್ಠಾನದಲ್ಲಿ ವಿಳಂಬವಾಯಿತು. ಅಲ್ಲದೆ ಕೇಂದ್ರ ಗೃಹ ಇಲಾಖೆ ಸಹ ಕೆಲವು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿ ತಿದ್ದುಪಡಿಗೆ ಸೂಚನೆ ನೀಡಿತ್ತು.

ಹಿಂದಿನ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ 1964 ರ ಗೋಹತ್ಯ ನಿಷೇಧ ಕಾಯ್ದೆಯನ್ನು ಮುಂದುವರೆಸಿತು. ಸದ್ಯ ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ ಅನುಷ್ಠಾನಗೊಳಿಸುವ ಪ್ರಯತ್ನದಲ್ಲಿದ್ದೇವೆ ಎಂದು ಸಚಿವರು ಹೇಳಿದರು.

ಕರ್ನಾಟಕ ಗೋ ಹತ್ಯೆ ಪ್ರತಿ ಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964 ಹಾಗೂ ನಿಯಮ 1967ರಲ್ಲಿ ಗೋವುಗಳು ಅಥವಾ ಎಮ್ಮೆ ಕರುಗಳು ವಧೆ/ಹತ್ಯೆಗೆ ನಿಷೇಧವಿದೆ. ಇತರೆ ಜಾನುವಾರು ಹೋರಿ, ಎತ್ತು, ಎಮ್ಮೆ, 12 ವರ್ಷಕ್ಕಿಂತ ಹೆಚ್ಚು ವಯಸ್ಸಾದಲ್ಲಿ, ಸಂವರ್ಧನೆಗೆ, ಭಾರ ಎಳೆಯಲು, ತೀವ್ರ ಕಾಯಿಲೆ, ಹಾಲು ಉತ್ಪಾದನೆಗೆ, ಅಥವಾ ಇನ್ನಾವುದೇ ಕಾರಣದಿಂದ ಅಸಮರ್ಥವಾಗಿದ್ದರೆ ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರ ಪಡೆದುಕೊಳ್ಳದ ಹೊರತು ವಧೆ ನಿಷೇಧವಿದೆ.

(ಗೋ ಹತ್ಯೆ ನಿಷೇಧ ಕಾಯ್ದೆಗೆ ಒತ್ತಾಯಿಸಿ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನದ ಒಂದು ಚಿತ್ರ)

 

ಕಾಯ್ದೆ ಜಾರಿಗೆ ಬಂದರೆ ಜಾನುವಾರುಗಳ ವಧೆಗೆ ನಿಷೇಧ, ಗೋಮಾಂಸ ಮಾರಾಟ ಹಾಗೂ ಬಳಕೆಗೆ ನಿಷೇಧ, ವಧೆಗಾಗಿ ರಾಜ್ಯದಲ್ಲಿ ಹಾಗೂ ಹೊರ ರಾಜ್ಯಗಳಿಗೆ ಜಾನುವಾರಗಳ ಅಕ್ರಮ ಸಾಗಾಣಿಕೆ, ವಧೆಗಾಗಿ ಜಾನುವಾರಗಳ ಖರೀದಿ, ಮಾರಾಟ ಅಥವಾ ವಿಲೇವಾರಿಗೆ ಕಡಿವಾಣ ಬೀಳಲಿದೆ. ಅಲ್ಲದೇ ಬೇರೆ ರಾಜ್ಯಗಳಲ್ಲಿ ಅನುಷ್ಠಾನವಾಗಿರುವ ಕಾಯ್ದೆಯನ್ನು ಅವಲೋಕಿಸಿ ಗೋ ಮಾತೆಯ ಸಂರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದು ಸಚಿವ ಚೌಹಾಣ್ ಹೇಳಿದ್ದಾರೆ.

ಈಗಾಗಲೇ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಅಸ್ಥಿತ್ವಕ್ಕೆ ಬಂದಿದ್ದು ಅದರ ಅಡಿಯಲ್ಲಿ ಯಾವುದೇ ರೀತಿಯ ಪ್ರಾಣಿ ಹಿಂಸೆಯನ್ನು ತಡೆಯಬಹುದಾಗಿದ್ದು. ಗೋವಂಶ ಹತ್ಯ, ಗೋವುಗಳ ಅಕ್ರಮ ಸಾಗಾಟ, ಹಿಂಸೆ ತಡೆಯುವ ಬಗ್ಗೆ ಮಂಡಳಿ ಈಗಾಗಲೇ ಕಾರ್ಯಪ್ರವೃತ್ತವಾಗಿದೆ.

ದೇಶದಲ್ಲಿ ಹಲವು ರಾಜ್ಯಗಳು ಗೋಹತ್ಯೆ ನಿಷೇಧ ಅನುಷ್ಟಾನ ಜಾರಿಗೆ ತಂದಿದ್ದು ಕರ್ನಾಟಕದಲ್ಲಿಯೂ ಸಮರ್ಪಕವಾಗಿ ಕಾರ್ಯಗತಗೊಳಿಸಲು ಸಿದ್ದವಾಗಿದೆ.

ಗೋಹತ್ಯೆ ನಿಷೇಧ ಹೇರಿದ ರಾಜ್ಯಗಳು

ರಾಜಸ್ಥಾನ್, ಆಂಧ್ರಪ್ರದೇಶ ತೆಲಂಗಾಣ, ಅಸ್ಸಾಂ, ಬಿಹಾರ, ಚಂಡೀಗಡ, ಛತ್ತೀಸಗಡ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ್, ಜಾರ್ಖಂಡ್, ಮಧ್ಯ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ತಮಿಳನಾಡು, ಉತ್ತರ ಪ್ರದೇಶರಾಜ್ಯಗಳಲ್ಲಿ ಗೋಹತ್ಯೆ ನಿಷೆಧ ಕಾಯ್ದೆ ಜಾರಿಯಲ್ಲಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಈರುಳ್ಳಿ ಬೆಲೆ ದಿಢೀರ್ ಕುಸಿತ

Harshitha Harish

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ವಿಧಿವಶ

Upayuktha

ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ 273 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

Upayuktha