ನವದೆಹಲಿ: ಕೋವಿಡ್ ವೈರಸ್ ಸೋಂಕಿಗೆ ಮತ್ತೊಬ್ಬರು ಜನಪ್ರತಿನಿಧಿ ಬಲಿಯಾಗಿದ್ದು, ಸೋಂಕಿಗೆ ಬಲಿಯಾಗಿ ಉತ್ತರಾ ಖಂಡದ ಬಿಜೆಪಿ ಶಾಸಕ ಚಿಕಿತ್ಸೆ ಫಲಿಸದೆ ನಿಧನರಾದರು.
ಉತ್ತರಾಖಂಡ ರಾಜ್ಯದ ಅಲ್ಮೋರಾ ಜಿಲ್ಲೆಯ ಸಾಲ್ಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಂದ್ರ ಸಿಂಗ್ ಜೀನಾ ಅವರು ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೂಲ ಗಳ ಪ್ರಕಾರ ಅವರು ಕಳೆದ 15 ದಿನಗಳ ಹಿಂದೆ ಸುರೇಂದ್ರ ಸಿಂಗ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಅವರು ಗುರುವಾರ ಬೆಳಗ್ಗೆ ಸುರೇಂದ್ರ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಇವರ ಪತ್ನಿ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದರು ಎಂದು ತಿಳಿಸಿದ್ದಾರೆ