ರಾಜ್ಯ

ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಸ್ಥಳಗಳ ಪರಿಶೀಲನೆ ನಡೆಸಿದ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಸ್ಥಳವನ್ನು ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಾಮಗಾರಿಗಳನ್ನು ಅತಿ ವೇಗವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಸೂಚನೆ ನೀಡಿದರು.

ರೇಸ್ ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ಹೇಯ್ಸ್ ರಸ್ತೆ, ಹುಡ್ ಸ್ಟ್ರೀಟ್, ಟಾಟಾ ಲೇನ್, ಕ್ಯಾಪಿಟಲ್ ಹೋಟೆಲ್, ರಾಜಭವನ ಜಂಕ್ಷನ್ ಮತ್ತು ಪ್ಲಾನೆಟೇರಿಯಂ ರಸ್ತೆಗಳ ಕಾಮಗಾರಿಯನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್, ಸಚಿವರಾದ ಆರ್.ಅಶೋಕ್, ಭೈರತಿ ಬಸವರಾಜ್, ಕೆ.ಗೋಪಾಲಯ್ಯ, ಸಂಸದ ಪಿಸಿ ಮೋಹನ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹಾಗೂ ಸರ್ಕಾರಿ ಹಿರಿಯ ಅಧಿಕಾರಿಗಳು ಜೊತೆಯಲ್ಲಿದ್ದರು.

 

Related posts

ಶೀಘ್ರದಲ್ಲೇ ಉಚಿತ ಮರಳು ನೀತಿ ಜಾರಿ: ಬಡವರಿಗೆ 100ರಿಂದ 200 ರೂ ದರದಲ್ಲಿ ಟನ್ ಮರಳು ಪೂರೈಕೆ

Upayuktha

ಇನ್ಫೋಸಿಸ್ ಪ್ರತಿಷ್ಠಾನ ದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ; ಆರೋಪಿಗಳ ವಿರುದ್ಧ ದೂರು

Harshitha Harish

ಸಂಪುಟ ವಿಸ್ತರಣೆ ಬಗ್ಗೆ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

Harshitha Harish