ಸ್ಥಳೀಯ

ಕಡಬ ತಾ। ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಸಮ್ಯಕ್ತ್ ಜೈನ್ ಆಯ್ಕೆ*

ಕಡಬ : ತಾಲೂಕಿನ ಎರಡನೇ ಸಾಹಿತ್ಯ ಸಮ್ಮೇಳನವು ಫೆ.24 ರಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಲಿದೆ.

ಈ ಸಮ್ಮೇಳನದ ಕವಿಗೋಷ್ಠಿಗಾಗಿ ನೂಜಿಬಾಳ್ತಿಲದ ಯುವ ಸಾಹಿತಿ ಸಮ್ಯಕ್ತ್ ಜೈನ್ ರವರು ಆಯ್ಕೆಯಾಗಿದ್ದಾರೆ.

ಸಾಫಿಯೆನ್ಶಿಯಾ ಬೆಥನಿ ಕಾಲೇಜು ನೆಲ್ಯಾಡಿಯಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಮುಂದುವರೆಸುತ್ತಿರುವ ಇವರು ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಹಾಗು ಮಂಜುಳಾ ದಂಪತಿಯ ಪುತ್ರ .

ಇವರು ಎಳೆವಯಸ್ಸಿನಲ್ಲಿಯೇ ಮೂರು ಸಾಹಿತ್ಯ ಕೃತಿ ಬರೆದು ಬಿಡುಗಡೆಗೊಳಿಸಿ ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ.

ಕಡಬ ತಾಲೂಕಿನ ಮೊದಲ ತಾಲೂಕು ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲೂ ಭಾಗವಹಿಸಿದ ಹೆಗ್ಗಳಿಕೆಗೆ ಭಾಜನರಾಗಿರುತ್ತಾರೆ .

Related posts

ಜ.11 ರಂದು ಮಂಗಳೂರಿನಲ್ಲಿ ಡಾ. ಪೆರ್ಲರ ಸಾಹಿತ್ಯಾವಲೋಕನ ಕಾರ್ಯಕ್ರಮ

Upayuktha

ಉಪ್ಪಿನಂಗಡಿ: ನೆರೆ ಸಂಭಾವ್ಯ ಪ್ರದೇಶಗಳಿಗೆ ಎನ್‌ಡಿಆರ್‌ಎಫ್‌ ಅಧಿಕಾರಿಗಳ ಭೇಟಿ

Upayuktha

ಡಿ.27ರಂದು `ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’; ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ

Upayuktha