ಗ್ರಾಮಾಂತರ ಸ್ಥಳೀಯ

ಜನರೇ ನಿರ್ಮಿಸಿದ ಬಸ್ ತಂಗುದಾಣ: ಹೊಸಳ್ಳಿ ಗ್ರಾಮಸ್ಥರ ಮಾದರಿ ಕಾರ್ಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಹಾಗೂ ಜನರಿಗೆ ನೆರವಾಗಲು ಯಾವುದೇ ಸರ್ಕಾರದ ಧನ ಸಹಾಯ ಪಡೆಯದೆ ನೂತನ ಬಸ್ ತಂಗುದಾಣ ನಿರ್ಮಾಣ ಮಾಡಿ ಮಾದರಿಯಾಗಿದ್ದಾರೆ.

ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಮಾರ್ಗದಲ್ಲಿ ಯಾವುದೇ ಬಸ್ ತಂಗುದಾಣದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು, ಗರ್ಭಿಣಿಯರು ಹಾಗೂ ವಯಸ್ಸಾದವರು ಪರದಾಡುವಂತಾಗಿತ್ತು. ಈ ಬಗ್ಗೆ ಬಹಳ ವರ್ಷಗಳಿಂದ ಜನಪ್ರತಿನಿಧಿಗಳಿಗೆ ಮನವಿ ನೀಡುತ್ತಾ ಬಂದಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ.

ಇದರಿಂದ ಬೇಸತ್ತು ಜನರೇ ಮರಳು, ಕಲ್ಲು, ಸಿಮೆಂಟ್ ಇತ್ಯಾದಿ ಅಗತ್ಯ ಸಾಮಾನುಗಳನ್ನು ಹೊಂದಿಸಿ ಊರಿನ ಟೈಲ್ಸ್ ಮೇಸ್ತ್ರಿ, ವೆಲ್ಡಿಂಗ್ ವರ್ಕ್ಸ್ ಮತ್ತು ಗೌಂಡಿಗಳ ಸಹಾಯದಿಂದ ಕೇವಲ ಒಂದು ವಾರದಲ್ಲಿ ತಮ್ಮ ಬಿಡುವಿನ ಸಮಯದಲ್ಲಿ ಕೆಲಸ ಮಾಡಿ ಬಸ್ ತಂಗುದಾಣವನ್ನು ನಿರ್ಮಿಸಿದ್ದಾರೆ.

ಅಷ್ಟೇ ಅಲ್ಲದೆ ಬಸ್ ನಿಲ್ದಾಣದ ಹೊರಗೆ ಊರಿನ ಸಂಸ್ಕೃತಿ, ಬೇಸಾಯ ಮತ್ತು ಹಾಲು ಉತ್ಪಾದನೆ ಕೇಂದ್ರದ ಚಿತ್ರಗಳನ್ನು ಬಿಡಿಸಲಾಗಿದ್ದು, ನೋಡಲು ಆಕರ್ಷಕವಾಗಿದೆ. ವಿಜಯ ದಶಮಿಯ ಶುಭ ಸಂದರ್ಭದಲ್ಲಿ ಊರಿನ ಹಿರಿಯರು ಈ ತಂಗುದಾಣವನ್ನು ಉದ್ಘಾಟನೆಗೊಳಿಸಿ ಪ್ರಯಾಣಿಕರಿಗೆ ಅನಕೂಲ ಮಾಡಿಕೊಟ್ಟಿರುವುದು ಶ್ಲಾಘನೀಯವಾಗಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಎಸ್.ಡಿ.ಎಂ ಅಂತರರಾಷ್ಟ್ರೀಯ ವರ್ಚ್ಯುವಲ್ ಕಾನ್ಫರೆನ್ಸ್

Upayuktha

ದೈಹಿಕ ಶಿಕ್ಷಣ ಶಿಕ್ಷಕರಿಗೆ ಕಾರ್ಯಾಗಾರ, ಪುರಸ್ಕಾರ

Upayuktha

ಯಕ್ಷಾಭಿನಯ ಬಳಗ ಮಂಗಳೂರು ಉದ್ಘಾಟನೆ, ನಗೆಹಬ್ಬ ನಾಳೆ ( ಜ.18)

Upayuktha

Leave a Comment