ಅಪಘಾತ- ದುರಂತ ಜಿಲ್ಲಾ ಸುದ್ದಿಗಳು

‘ಪ್ಯಾಟೆ ಹುಡುಗಿ ಹಳ್ಳಿ ಲೈಫ್ ಸೀಜನ್ 4’ ಗೆದ್ದ ಮೆಬೀನಾ ಮೈಕೆಲ್ ಕಾರು ಅಪಘಾತದಲ್ಲಿ ದುರ್ಮರಣ

ಮಂಗಳೂರು: ಖಾಸಗಿ ಟಿವಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ ಖ್ಯಾತಿಯ ಮೆಬೀನಾ ಮೈಕೆಲ್‌ ಅವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ಬಳಿ ಸಂಭವಿಸಿದ ಹೆದ್ದಾರಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಸೋಮವಾರಪೇಟೆಯತ್ತ ಕಾರಿನಲ್ಲಿ ತೆರಳುತ್ತಿದ್ದ ಮೆಬೀನಾ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಸಂಭವಿಸಿದ ದುರಂತದಲ್ಲಿ ತೀವ್ರ ಗಾಯಗೊಂಡು ಬಳಿಕ ಮೃತಪಟ್ಟರು.

ಅವರು ಪ್ರಯಾಣಿಸುತ್ತಿದ್ದ ಕಾರು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಅವರ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅವರ ಜತೆಗೆ ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ಯಾಟೆ ಹುಡುಗಿ ಹಳ್ಳಿ ಲೈಫ್ ರಿಯಾಲಿಟಿ ಶೋದ ನಾಲ್ಕನೇ ಸೀಸನ್‌ನಲ್ಲಿ ಮೆಬೀನಾ ವಿನ್ನರ್ ಆಗಿದ್ದರು. ಮಾಡೆಲಿಂಗ್ ಕೂಡ ಮಾಡುತ್ತಿದ್ದ ಅವರು ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡಿದ್ದರು.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಕಲಬುರಗಿ: ಶ್ರೀ ಮಾಧವ ಗೋಶಾಲೆಗೆ ಪ್ರತಿಷ್ಠಿತ ಐಎಸ್‌ಓ ಪ್ರಮಾಣಪತ್ರ

Upayuktha

ಸೆ.21ರಿಂದ ಕಾಸರಗೋಡು- ಮಂಗಳೂರು ಅಂತಾರಾಜ್ಯ ಬಸ್ ಸಂಚಾರ ಪುನರಾರಂಭ

Upayuktha

ಪಡುಬಿದ್ರಿ ಬೀಚ್ ಗೆ ಶೀಘ್ರದಲ್ಲಿ ಬ್ಲೂ ಫ್ಲಾಗ್ ಮಾನ್ಯತೆ: ಉಡುಪಿ ಡಿಸಿ ಜಿ. ಜಗದೀಶ್

Upayuktha