ರಾಜ್ಯ

ಸಂಪುಟ ವಿಸ್ತರಣೆ ಬಗ್ಗೆ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ನವದೆಹಲಿ- ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇಂದು ದೆಹಲಿಗೆ ಆಗಮಿಸಿದ್ದ ಸಿಎಂ ಬಿ.ಎಸ್ ವೈ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಅವರ ಜೊತೆಗೆ 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.

ಚರ್ಚೆಯ ವೇಳೆ ಬಿಎಸ್​ವೈ ಅವರು ನಡ್ಡಾ ಅವರಿಗೆ ಸಂಪುಟ ವಿಸ್ತರಣೆ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಜೊತೆಗೆ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಕೊಟ್ಟು ಬಂದಿದ್ದಾರೆ. ಹೈಕಮಾಂಡ್ ಇನ್ನು ಯಾವುದೇ ಅಂತಿಮ ತೀರ್ಮಾನವನ್ನು ತಿಳಿಸಿಲ್ಲ.

ಅವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್​ ಯಡಿಯೂರಪ್ಪ ಅವರು, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿ ತಿಳಿಸುವುದಾಗಿ ಹೇಳಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ.

ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಅಮಿತ್ ಶಾ ಅವರನ್ನು ಭೇಟಿ ಮಾಡುತ್ತಿಲ್ಲ. ಈಗ ನೇರವಾಗಿ ಬೆಂಗಳೂರಿಗೆ ತೆರಳುತ್ತಿದ್ದೇನೆ ಎಂದು ಹೇಳಿದರು.

ಎರಡು ಕ್ಷೇತ್ರಗಳ ಉಪಚುನಾವಣೆ ಮುಗಿದ ಬಳಿಕ ಸಿಎಂ ಬಿಎಸ್​ವೈ ಅವರು ಸಂಪುಟ ವಿಸ್ತರಣೆ ಅಥವಾ ಪುನಾರಚನೆಗಾಗಿ ಅನುಮತಿ ಪಡೆಯಲು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ.

ಆದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬಿಎಸ್​ವೈ ಅವರ ಅಭಿಪ್ರಾಯ ಹಾಗೂ ಪಟ್ಟಿಯನ್ನು ಪಡೆದು, ಕೊನೆಯ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ನಾಳೆ ಅಥವಾ ನಾಳಿದ್ದು, ಹೈಕಮಾಂಡ್​ನಿಂದ ನಿರ್ದೇಶನ ಬಂದ ಬಳಿಕ ಸಿಎಂ ಯಡಿಯೂರಪ್ಪ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ.

 

Related posts

ಕೊರೊನಾ ಅಪ್‌ಡೇಟ್: ಮಂಗಳೂರಿನಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೋಂಕು

Upayuktha

ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಆಯ್ಕೆ

Upayuktha

ಉ.ಪ್ರ. ಮುಖ್ಯಮಂತ್ರಿ ಯೋಗಿ ಅವರನ್ನು ಭೇಟಿಯಾದ ಪೇಜಾವರ ಶ್ರೀಗಳು: ವೈಭವದ ರಾಮನವಮಿ ಆಚರಿಸಲು ಮನವಿ

Upayuktha