ಕಲೆ ಸಂಸ್ಕೃತಿ ನಗರ ಸ್ಥಳೀಯ

ಶಾಸ್ತ್ರೀಯ ಮತ್ತು ಜಾನಪದ ನೃತ್ಯ ತರಬೇತಿ ತರಗತಿ ಜ.5ಕ್ಕೆ ಉದ್ಘಾಟನೆ

ಸಾಂದರ್ಭಿಕ ಚಿತ್ರ

ಮಂಗಳೂರು: ಚೂಂತಾರು ಸರೋಜಿನಿ ಭಟ್ ಪ್ರತಿಪ್ಠಾನ(ರಿ) ಮಂಗಳೂರು ಮತ್ತು ವೈಷ್ಣವಿ ನಾಟ್ಯಾಲಯ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಶಾಸ್ತ್ರೀಯ ಮತ್ತು ಜಾನಪದ ನೃತ್ಯ ತರಗತಿ ನಗರದ ಬಿಜೈ ಕಾಪಿಕಾಡಿನಲ್ಲಿರುವ ಹಕೂನ ಮಟಾಟ ಕ್ಲಬ್ ಇದರಲ್ಲಿ ಜ. 5ರಂದು ಭಾನುವಾರ ಉದ್ಘಾಟನೆಗೊಳ್ಳಲಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್ ಅವರು ಈ ತರಗತಿಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿದುಷಿ ಯೋಗೇಶ್ವರಿ ಜಯಪ್ರಕಾಶ್, ನಿರ್ದೇಶಕರು, ವೈಷ್ಣವಿ ನಾಟ್ಯಾಲಯ ಪುತ್ತೂರು ಇವರು ಭಾಗವಹಿಸಲಿದ್ದಾರೆ.

ಚೂಂತಾರು ಸರೋಜಿನಿ ಪ್ರತಿಷ್ಠಾನ(ರಿ) ಮಂಗಳೂರು ಇದರ ಗೌರವ ಅಧ್ಯಕ್ಷರಾದ ಚೂಂತಾರು ಲಕ್ಷ್ಮೀ ನಾರಾಯಣ ಭಟ್ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರಗಲಿದೆ ಎಂದು ಚೂಂತಾರು ಪ್ರತಿಷ್ಠಾನದ ಕಾರ್ಯದರ್ಶಿ ಡಾ|ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಮಾರಿ ಸ್ನೇಹ ಭಟ್ ಚೂಂತಾರು ಈ ತರಗತಿಗಳನ್ನು ನಿರ್ವಹಿಸಲಿದ್ದಾರೆ ಮತ್ತು ಆಸಕ್ತರು ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ – 9741182254.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಕಲಾ ಸೌರಭದಿಂದ ಸಾಧಕ ಸನ್ಮಾನ; ಕವಿ-ಕಾವ್ಯ ಸಂಗಮ

Upayuktha

ಕೆಎಸ್‍ಆರ್‌ಟಿಸಿಯಲ್ಲಿ ತಾಂತ್ರಿಕ ತರಬೇತಿಗೆ ಅರ್ಜಿ ಆಹ್ವಾನ

Upayuktha

ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಮಾನಸಿಕವಾಗಿ ಸದೃಢಗೊಳ್ಳಲು ಸಾಧ್ಯ: ಡಾ.ಡಿ. ವೀರೇಂದ್ರ ಹೆಗ್ಗಡೆ

Sushmitha Jain