ಪ್ರಮುಖ ರಾಜ್ಯ

ಉಪ ಚುನಾವಣೆಯಲ್ಲಿ 13 ಸ್ಥಾನಗಳು ಬಿಜೆಪಿಗೆ: ಸಿಎಂ ಬಿಎಸ್‌ವೈ ಭವಿಷ್ಯ

ಬೆಳ್ತಂಗಡಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 347 ಕೋಟಿ  ರೂ.ಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ

ಉಜಿರೆ: ವಿಧಾನ ಸಭೆ ಉಪ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದ ರಾಜಕೀಯ ಅಸ್ಥಿರತೆ ಕೊನೆಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಈಗ ಉಪ ಚುನಾವಣೆ ನಡೆದಿರುವ 15 ಸ್ಥಾನಗಳ ಪೈಕಿ 13ರಲ್ಲಿ ಬಿಜೆಪಿ ಜಯಗಳಿಸಲಿದೆ; ಉಳಿದೆರಡು ಸ್ಥಾನಗಳು ಜೆಡಿಎಸ್ ಮತ್ತು ಕಾಂಗ್ರೆಸ್‌ಗೆ ದಕ್ಕಲಿವೆ ಎಂದು ಮುಖ್ಯಮಂತ್ರಿ ಭವಿಷ್ಯ ನುಡಿದರು.

ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬೆಳ್ತಂಗಡಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 347 ಕೋಟಿ  ರೂ.ಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಮುಂದಿನ ಮೂರುವರೆ ವರ್ಷಗಳಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವಾಗಿ ಮಾಡಲಾಗುವುದು. ಶಾಸಕರುಗಳು ಏನು ಅಪೇಕ್ಷೆ ಪಡುತ್ತಾರೆಯೋ ಅದನ್ನು ಪೂರ್ಣಗೊಳಿಸಿ ಮುಂದಿನ ಚುನಾವಣೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲಲಾಗುವುದು ಎಂದು ಅವರು ನುಡಿದರು.

ಬೆಳ್ತಂಗಡಿ ತಾಲೂಕಿನ ಕಣಿಯೂರನ್ನು ಹೋಬಳಿ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿದರು.

ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶತ ರುದ್ರಾಭಿಷೇಕ ಪೂಜೆ ನೆರವೇರಿಸಿದರು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉಪಸ್ಥಿತರಿದ್ದರು.

(ಉಪಯಕ್ತ ನ್ಯೂಸ್ ಸುದ್ದಿಜಾಲ)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಹಲ್ಲಿಗೂ ಬಂತು ಹಚ್ಚೆ: ಫ್ಯಾಷನ್ನಿನ ಹೊಸ ರೂಪ

Upayuktha

ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ರವರಿಗೆ ಕೋವಿಡ್ ಪಾಸಿಟಿವ್

Harshitha Harish

ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ಭವನಕ್ಕೆ ಶೀಘ್ರ ಭೂಮಿ ಮಂಜೂರು: ಪೇಜಾವರ ಶ್ರೀಗಳಿಗೆ ಯೋಗಿ ಭರವಸೆ

Upayuktha