ಉಡುಪಿ: ಕರಂಬಳ್ಳಿ ವೇಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ನಡೆದ ಧರ್ಮ ಸಭೆಯಲ್ಲಿ 2004ರಿಂದ ಈ ವರೆಗೆ ಶ್ರೀ ದೇವಳವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವಲ್ಲಿ ಅಧ್ವರ್ಯುವಾಗಿ ಪ್ರಮುಖ ಪಾತ್ರವಹಿಸಿದ ಆಡಳಿತ ಮೊಕ್ತೇಸರ ಹಾಗೂ ಶಾಸಕ ಕೆ. ರಘುಪತಿ ಭಟ್ಟರನ್ನು ಜೀರ್ಣೋದ್ಧಾರ ಸಮಿತಿ ಬ್ರಹ್ಮಕಲಶೋತ್ಸವ ಸಮಿತಿ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರ ಪರವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಂಮಾನಿಸಿದರು.
ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥರು, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು, ರಾಜ್ಯ ವಿಧಾನ ಸಭೆ ಸ್ಪೀಕರ್ ವಿಶ್ವೇಶ್ವರ ಹೆಗೆಡೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಎಚ್ ಎನ್ ಜೀವರಾಜ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ ದಿವಾಕರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯಶ್ಪಾಲ್ ಎ ಸುವರ್ಣ ಪರ್ಯಾಯ ಅರ್ಚಕರುಗಳಾದ ಗೋವಿಂದ ಐತಾಳ್, ದಿವಾಕರ ಐತಾಳ್, ಪ್ರಸನ್ನ ಆಚಾರ್ಯ, ರಮೇಶ ಐತಾಳ್, ಆಡಳಿತ ಮಂಡಳಿ ಸದಸ್ಯರುಗಳಾದ ಕೆ ಗೋಪಾಲ ಶೆಟ್ಟಿ, ಶೇಖರ ಜತ್ತನ್ನ, ಎನ್ ಲಕ್ಷ್ಮಣ ಸೇರಿಗಾರ್, ಸುಂದರ ಅಮೀನ್, ಬಿ ಲಕ್ಷ್ಮೀನಾರಾಯಣ ಆಚಾರ್ಯ, ಶೈಲಶ್ರೀ ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ