ರಾಜ್ಯ

ತುಮಕೂರು ಸಿದ್ದಗಂಗೆಯ ಶಿವಕುಮಾರ ಶ್ರೀಗಳ ಎರಡನೇ ಪುಣ್ಯಸ್ಮರಣೆ; ದಾಸೋಹ ದಿನ ಘೋಷಣೆ- ಬಿಎಸ್ ವೈ

ತುಮಕೂರು: ಕಾಯಕಯೋಗಿ ತುಮಕೂರು ಸಿದ್ದಗಂಗೆಯ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಎರಡನೇ ಪುಣ್ಯಸ್ಮರಣೆ ದಿನವಾದ ಇಂದು ಶ್ರೀಗಳ ಪುಣ್ಯಸ್ಮರಣೆ ದಿನವನ್ನು “ದಾಸೋಹ ದಿನ” ಎಂದು ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ ರವರು ಘೋಷಣೆ ಮಾಡಿದರು.

ಶ್ರೀಗಳ 2 ನೇ ಪುಣ್ಯ ಸ್ಮರಣೆ ದಿನದಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ  ಯಡಿಯೂರಪ್ಪ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು.

ಈ ಸಂಧರ್ಭದಲ್ಲಿ ಮಾತನಾಡಿದ ಸಿಎಂ “ಸಿದ್ದಗಂಗೆಯ ಶಿವಕುಮಾರ ಶ್ರೀಗಳು ನಡೆದಾಡುವ ದೇವರು ಎಂದೇ ಹೆಸರಾಗಿದ್ದರು. 80 ವರ್ಷಗಳ ಕಾಲ ನಿರಂತರವಾಗಿ ಅಕ್ಷರ, ಅನ್ನ ನೀಡಿ ಉತ್ತಮ ವ್ಯಕ್ತಿಗಳು, ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ್ದರು. ಸಿದ್ದಗಂಗಾ ಮಠದ ಕೀರ್ತಿ ವಿಶ್ವದೆತ್ತರಕ್ಕೆ ಕೊಂಡೊಯ್ದಿದ್ದ ಶ್ರೀಗಳ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನ ಎಂದು ಘೋಷಣೆ ಮಾಡುತ್ತಿದ್ದು ಸರ್ಕಾರದಿಂದ ಈ ಕುರಿತಂತೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ”  ಎಂದರು.

ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಪೀಠದ ಶ್ವಾಸಗುರು ಶ್ರೀ ವಚನಾನಂದ ಸ್ವಾಮೀಜಿ, ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ, ಹಲವು ಗಣ್ಯರು ಉಪಸ್ಥಿತರಿದ್ದರು.

 

Related posts

ಮಧ್ಯಾಹ್ನದ ವರೆಗಿನ ಅಪ್‌ಡೇಟ್ಸ್: ರಾಜ್ಯದಲ್ಲಿ ಇಂದು 10 ಕೊರೊನಾ ಪಾಸಿಟಿವ್

Upayuktha

ಇಂದು ವಿಶ್ವ ಕ್ಯಾನ್ಸರ್ ದಿನ ; ಬಿಎಸ್ ವೈ ಟ್ವೀಟ್

Harshitha Harish

ಅರಣ್ಯ ನಾಶಕ್ಕೆ ಕಾರಣರಾಗುವವರ ಮೇಲೆ ಕ್ರಮ- ಅರವಿಂದ ಲಿಂಬಾವಳಿ

Harshitha Harish