ರಾಯ್ ಪುರ: ನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಗುಂಡು ಹಾರಿಸಿಕೊಂಡು ಕೋಬ್ರಾ ಕಮಾಂಡೋ ಆತ್ಮಹತ್ಯೆ ಮಾಡಿಕೊಂಡ ಘಟನೆ ಯೊಂದು ಚತ್ತೀಸ್ ಘಢ ದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರದಂದು ಮುಂಜಾನೆ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕೋಬ್ರಾಸ್ ನ 206ನೇ ಬೆಟಾಲಿಯನ್ ನ ಮುಖ್ಯಪೇದೆಯಾಗಿದ್ದ ಹರ್ಜೀತ್ ಸಿಂಗ್ (40) ತನ್ನದೇ ಸರ್ವೀಸ್ ರೈಫಲ್ ನಿಂದ ಗುಂಡು ಹೊಡೆದುಕೊಂಡು ಮೃತಪಟ್ಟರು.
ಗುರುವಾರ ರಾತ್ರಿ ವೇಳೆ ತೆಮೆಲ್ವಾಡ ಕ್ಯಾಂಪ್ ನಲ್ಲಿ ಅಧಿಕಾರಿಗಳು ನಕ್ಸಲ್ ನಿಗ್ರಹ ಕಾರ್ಯಾಚರಣೆ ಪ್ರಾರಂಭಿಸಿತ್ತು. ಕಾರ್ಯಾಚರಣೆ ನಡೆಯುತ್ತಿರುವಾಗಲೇ ಸಿಂಗ್ ತಮ್ಮ ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಸ್ಥಳದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣುತ್ತದೆ, ಹೆಚ್ಚಿನ ತನಿಖೆ ಮುಂದುವರೆದಿದೆ, ಈ ಘಟನೆಗೆ ನಿಜವಾದ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.