ನಗರ ರಾಜ್ಯ

ವಿಷ್ಣು ವರ್ಧನ್ ಸ್ಮಾರಕ ಭವನ ನಿರ್ಮಾಣ ; ಬಿಎಸ್ ವೈ ಆನ್ಲೈನ್ ಮೂಲಕ ಚಾಲನೆ

ಮೈಸೂರು: ಇಂದು ದಿವಂಗತ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆನ್‍ಲೈನ್ ಮೂಲಕ ಚಾಲನೆ ನೀಡಿದ್ದಾರೆ.

ಸಿಎಂ ರವರು ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣು ಸ್ಮಾರಕಕ್ಕೆ ಆನ್‍ಲೈನ್ ಮೂಲಕ ಭೂಮಿ ಪೂಜೆಗೆ ಚಾಲನೆ ಕೊಟ್ಟರು. ಮೈಸೂರಿನ ಹಾಲಾಳು ಗ್ರಾಮದಲ್ಲಿ ಶಂಕು ಸ್ಥಾಪನೆಯ ಸಮಾರಂಭ ನಡೆಯಿತು.

ಹಿರಿಯ ನಟಿ ಭಾರತಿ ಅವರು ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.

ಈ ವೇಳೆ  ಮಾತನಾಡಿದ ಬಿಎಸ್ವೈ, ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಈಗಾಗಲೇ ತುಂಬಾ ತಡವಾಗಿದೆ. ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಡಾ.ವಿಷ್ಣುವರ್ಧನ್ ತವರು ಜಿಲ್ಲೆ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಅತ್ಯಂತ ಒಳ್ಳೆಯದು ಎಂದರು.

ಮೈಸೂರು ತಾಲೂಕಿನ ಹೆಚ್.ಡಿ.ಕೋಟೆ ರಸ್ತೆಯ ಮಾರ್ಗದಲ್ಲಿ ಬರುವ ಹಾಲಾಳು ಗ್ರಾಮದ 5 ಎಕರೆ ಪ್ರದೇಶದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಪೊಲೀಸ್ ವಸತಿಗೃಹ ನಿರ್ಮಾಣ ಸಂಸ್ಥೆಯ ವತಿಯಿಂದ ಕಾಮಗಾರಿ ಮಾಡಲಾಗುತ್ತದೆ. ಈಗಾಗಲೇ 11 ಕೋಟಿ ರೂ. ಅನುದಾನ ಮಂಜೂರಾಗಿದೆ.

ಕೆಲಸ ಪ್ರಾರಂಭಿಸಲು ಸುಮಾರು 5 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಡಾ. ವಿಷ್ಣುವರ್ಧನ್ ಸ್ಮಾರಕವು ಸುಸಜ್ಜಿತವಾಗಿ ನಿರ್ಮಾಣಗೊಳ್ಳಲು ಎಲ್ಲ ರೀತಿಯ ಕ್ರಮಕೈಗೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಹಾಗೆಯೇ ಡಾ.ವಿಷ್ಣುವರ್ಧನ್ ಸ್ಮಾರಕ ಭವನ 11 ಕೋಟಿ ರೂ. ನಿರ್ಮಾಣವಾಗುತ್ತಿದೆ. ಸ್ಮಾರಕ ನಿರ್ಮಾಣದ ಗುತ್ತಿಗೆಯನ್ನು ಪೊಲೀಸ್ ವಸತಿ ನಿಗಮ ಕ್ಕೆ ನೀಡಲಾಗಿದ್ದು ಎಂ-9 ಡಿಸೈನ್ ಸ್ಟುಡಿಯೋದಿಂದ ಆರ್ಕಿಟೆಕ್ ಡಿಸೈನ್ ಮಾಡಿಸಲಾಗಿದೆ.

ವಿಷ್ಣುವರ್ಧನ್ ಸ್ಮಾರಕ ಭವನದಲ್ಲಿ ವಿಷ್ಣು ಪುತ್ಥಳಿ, ಆಡಿಟೋರಿಯಂ, ಫೋಟೋ ಗ್ಯಾಲರಿ, ಉದ್ಯಾನವನ, ವಾಟರ್ ಪೌಂಡ್ ಇರುತ್ತದೆ ಎಂದು ತಿಳಿಸಿದರು.

Related posts

ಕೊರೊನಾ ತಡೆ ಕ್ರಮ: ಬೀಚ್‌ಗಳಲ್ಲಿ ಜನ ಸೇರದಂತೆ ನೋಡಿಕೊಳ್ಳಲು ಗೃಹರಕ್ಷಕರ ನಿಯೋಜನೆ

Upayuktha

ಫೆ 12 ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರಿಗೆ ‘ಸಂಚಾರಿ ಕನಕ ಪುರಂದರ ಪ್ರಶಸ್ತಿ’ ಪ್ರದಾನ

Upayuktha

ಖ್ಯಾತ ಗಾಯಕ ಎಸ್‌ಪಿಬಿ ಅವರ ಪತ್ನಿಗೂ ಕೋವಿಡ್ ಪಾಸಿಟಿವ್

Harshitha Harish