ಆರೋಗ್ಯ ದೇಶ-ವಿದೇಶ ಪ್ರಮುಖ

ದೇಶದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣ 31ಕ್ಕೆ ಏರಿಕೆ

ಪಿಟಿಐ ಚಿತ್ರ (ಕೃಪೆ: ನ್ಯೂಸ್ ಆನ್ ಎಐಆರ್)

ಹೊಸದಿಲ್ಲಿ:

ದೇಶದಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟ ಪ್ರಕರಣಗಳು 31ಕ್ಕೆ ಏರಿವೆ. ಥಾಯ್ಲೆಂಡ್ ಮತ್ತು ಮಲೇಷ್ಯಾಗೆ ಪ್ರಯಾಣಿಸಿದ ಬಳಿಕ ಭಾರತಕ್ಕೆ ಮರಳಿದ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವಿಶೇಷ ಕಾರ್ಯದರ್ಶಿ ಸಂಜೀವ ಕುಮಾರ್‌ ಈ ಮಾಹಿತಿ ನೀಡಿದ್ದಾರೆ.

ಸೋಂಕು ತಗುಲಿದ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆತನ ಪರಿಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದರು.

ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ದೇಶದ 30 ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಗುರಿಪಡಿಸುವಂತೆ ಆದೇಶಿಸಲಾಗಿದೆ.

ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ನಿನ್ನೆ (ಗುರುವಾರ) ರಾತ್ರಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಸಾರ್ವತ್ರಿಕ ಆರೋಗ್ಯ ತಪಾಸಣೆಯ ಸಿದ್ಧತೆ ಕುರಿತು ಮೇಲ್ವಿಚಾರಣೆ ನಡೆಸಿದ್ದಾರೆ. ದಿಲ್ಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದ ಆಸ್ಪತ್ರೆಗಳ ಮಾಲೀಕರ ಜತೆಗೂ ಸಚಿವರು ಸಭೆ ನಡೆಸಿದ್ದು ಸನ್ನದ್ಧತೆಯ ಪರಾಮರ್ಶೆ ನಡೆಸಿದರು ಎಂದು ಕುಮಾರ್ ತಿಳಿಸಿದರು.

ಸೋಂಕು ತಗುಲಿದ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳಲ್ಲಿ ಹಾಸಿಗೆ ಸೌಲಭ್ಯಗಳ ಬಗ್ಗೆ, ಪ್ರತ್ಯೇಕ (ಐಸೊಲೇಶನ್) ವಾರ್ಡ್‌, ಮಾದರಿಗಳ ಸಂಗ್ರಹಣೆಗೆ ವಿಧಿಸಲಾದ ಶಿಷ್ಟಾಚಾರ, ನಿಯಮಗಳ ಬಗ್ಗೆ ಸಚಿವರು ವಿಸ್ತೃತ ಚರ್ಚೆ ನಡೆಸಿದರು.

ಕೊರೊನಾ ವೈರಸ್ (Covid-19) ಕುರಿತು ಆರೋಗ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಇಂದು ತರಬೇತಿ ಆಯೋಜಿಸಲಾಗಿದ್ದು, ಎಲ್ಲ ರಾಜ್ಯಗಳು, ಆಸ್ಪತ್ರೆಗಳು, ರೈಲ್ವೇ, ರಕ್ಷಣಾ ಇಲಾಖೆ ಮತ್ತು ಅರೆ ಮಿಲಿಟರಿ ಪಡೆಗಳ ಆರೋಗ್ಯಾಧಿಕಾರಿಗಳು ಪಾಲ್ಗೊಂಡಿದ್ದರು.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಮನೆಯ ಮೇಲ್ಚಾವಣಿ ಕುಸಿದ ಪರಿಣಾಮ ಮೂವರು ಸಾವು;6 ಮಂದಿ ಗಂಭೀರ

Harshitha Harish

ಸೂರ್ಯಗ್ರಹಣ: ನಭೋಮಂಡಲದ ಕೌತುಕ ವೀಕ್ಷಿಸಿ ಸಂಭ್ರಮಿಸಿದ ಜನ

Upayuktha

ಕೊರೊನಾ ವೈರಸ್‌: ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ ಜಾಗೃತಿ ಅಭಿಯಾನ

Upayuktha