ಮಂಗಳೂರು: ರಾಜ್ಯದಲ್ಲಿ ಗುರುವಾರ 22 ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 981ಕ್ಕೆ ತಲುಪಿದೆ. ಗುರುವಾರ ಇಬ್ಬರು ಮೃತಪಟ್ಟಿದ್ದು, ಒಟ್ಟು 35 ಮಂದಿ ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುರುವಾರ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಕ್ತಿನಗರದ 80 ವರ್ಷದ ಮಹಿಳೆ ಮೃತಪಟ್ಡಿದ್ದಾರೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಒಟ್ಟು ಐವರು ಬಲಿಯಾಗಿದ್ದಾರೆ. ಮೃತಪಟ್ಟ ಎಲ್ಲರಿಗೂ ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ಸೋಂಕು ಹರಡಿದೆ.
(ಉಪಯುಕ್ತ ನ್ಯೂಸ್)
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ