ಪ್ರಮುಖ ರಾಜ್ಯ

ಕೋವಿಡ್ 19 ಸಂಜೆಯ ಬುಲೆಟಿನ್‌: ರಾಜ್ಯದಲ್ಲಿಂದು 143 ಕೊರೊನಾ ಸೋಂಕು

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಗುರುವಾರ ಸಂಜೆಯ ಬುಲಿಟಿನ್ ನಲ್ಲಿ 143 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1605ಕ್ಕೆ ಏರಿಕೆಯಾಗಿದೆ. ಒಟ್ಟು 41 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಆರು ಮಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇವರೆಲ್ಲ ಮೇ 18ರಂದು ದುಬೈಯಿಂದ ಮಂಗಳೂರಿಗೆ ವಿಮಾನದಲ್ಲಿ ಬಂದು ಕ್ವಾರಂಟೈನ್ ನಲ್ಲಿ ಇದ್ದವರು. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.

ಉಡುಪಿಯಲ್ಲಿ 26 ಹೊಸ ಪ್ರಕರಣ ವರದಿಯಾಗಿದೆ. ಇವರಲ್ಲಿ ಬಹುತೇಕರು ಮಹಾರಾಷ್ಟ್ರದಿಂದ ಬಂದವರು. ಈ ಮೂಲಕ ಉಡುಪಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಕೇರಳದಲ್ಲಿ ಮತ್ತೆ 24 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರಲ್ಲಿ ಕಾಸರಗೋಡಿನಲ್ಲಿ 1 ಪ್ರಕರಣ ದಾಖಲಾಗಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಅತಿಥಿ ಉಪನ್ಯಾಸಕರಿಗೂ ಆರ್ಥಿಕ ನೆರವು ನೀಡಬೇಕು: ಎಚ್‌.ಡಿ ಕುಮಾರಸ್ವಾಮಿ

Harshitha Harish

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಲೋಕಾರ್ಪಣೆ 

Sushmitha Jain

ಒಂದೇ ತಿಂಗಳಲ್ಲಿ 2 ಬಾರಿ ಹೆಚ್ಚಳವಾಯಿತು ಅಡುಗೆ ಅನಿಲ ದರ: ಸಾಮಾನ್ಯ ವರ್ಗದವರ ವಿರುದ್ಧ ಬೆಲೆ ಹೆಚ್ಚಳ ಅಸ್ತ್ರ

Sushmitha Jain