ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿಇದುವರೆಗೆ 28 ಮಂದಿಗೆ ಸೋಂಕು ತಗುಲಿದ್ದು, ಅವರಲ್ಲಿ 13 ಮಂದಿ ಗುಣಮುಖರಾಗಿದ್ದಾರೆ. ಇನ್ನು 12 ಮಂದಿ ಚಿಕಿತ್ಸೆಯಲ್ಲಿದ್ದು, ಮೂವರು ಮೃತಪಟ್ಟಿದ್ದಾರೆ.
ಉಡುಪಿ ಹಾಗೂ ನೆರೆಯ ಕಾಸರಗೋಡು ಜಿಲ್ಲೆಯಲ್ಲೂಇಂದು ಕೊರೊನಾ ಸೋಂಕು ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಒಬ್ಬ ರೋಗಿ ಮಾತ್ರ ಚಿಕಿತ್ಸೆಯಲ್ಲಿದ್ದು, ಉಳಿದವರೆಲ್ಲ ಬಿಡುಗಡೆಯಾಗಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಇಂದು 12 ಹೊಸ ಪ್ರಕರಣ ವರದಿಯಾಗಿದೆ. ದಾವಣಗೆರೆ- 3, ಕಲಬುರ್ಗಿ- 3, ಬಾದಾಮಿ- 3 ಹಾಗೂ ಧಾರವಾಡ, ಬೆಂಗಳೂರು ನಗರ ಮತ್ತು ಬೆಳಗಾವಿಯಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ಗುರುವಾರ ಒಬ್ಬರು ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
(ಉಪಯುಕ್ತ ನ್ಯೂಸ್)
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ