ಜಿಲ್ಲಾ ಸುದ್ದಿಗಳು ಪ್ರಮುಖ ಸ್ಥಳೀಯ

ಕೋವಿಡ್‌ 19 ಅಪ್‌ಡೇಟ್ಸ್‌: ದ.ಕ- 14, ಉಡುಪಿ 13 ಕೊರೊನಾ ಪ್ರಕರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 14 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದರಲ್ಲಿ ಉಳ್ಳಾಲ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರಿನ 17 ವರ್ಷದ ಬಾಲಕನಿಗೆ ಸ್ಥಳೀಯವಾಗಿ ಸೋಂಕು ಹರಡಿದ್ದರೆ, ಉಳಿದ 13 ಮಂದಿಯೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 119 ಆಗಿದ್ದು, ಇವರಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಒಟ್ಟಾರೆ 44 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನು 68 ಮಂದಿ ಚಿಕಿತ್ಸೆಯಲ್ಲಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇಂದು 13 ಪ್ರಕರಣ ಪತ್ತೆಯಾಗಿದೆ. ಎಲ್ಲರೂ ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 177ಕ್ಕೆ ಏರಿದೆ.

ಕರ್ನಾಟಕ ರಾಜ್ಯದಲ್ಲಿ ಶನಿವಾರ 141 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇವರಲ್ಲಿ 90 ಮಂದಿ ಅಂತಾರಾಜ್ಯ ಪ್ರಯಾಣಿಕರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 2922ಕ್ಕೇರಿದೆ. ಇಂದು ಬೀದರ್ ನ ಒಬ್ಬ ರೋಗಿ ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 49ಕ್ಕೆ ಏರಿದೆ.

ಕೇರಳ ರಾಜ್ಯದಲ್ಲಿ ಶನಿವಾರ ವರದಿಯಲ್ಲಿ 58 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕಾಸರಗೋಡು ಜಿಲ್ಲೆಯಲ್ಲಿ 3 ಪ್ರಕರಣ ವರದಿಯಾಗಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಸೆ.30: ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ದೃಷ್ಟಿ’ ಕಾರ್ಯಾಗಾರ

Upayuktha

ಮಣಿಪಾಲದಲ್ಲಿ ಗಾಯಗೊಂಡ ಗೋವಿನ ರಕ್ಷಣೆ; ಆಶ್ರಯ ಒದಗಿಸಿದ ಹೊಸಬೆಳಕು ಆಶ್ರಮ

Upayuktha

‘ನಿರ್ಮಲ ಕನಸುಗಳು’ ಕೃತಿ ಬಿಡುಗಡೆ

Upayuktha