ಪ್ರಮುಖ ರಾಜ್ಯ

ಕೋವಿಡ್ 19 ಅಪ್‌ಡೇಟ್ಸ್: ರಾಜ್ಯದಲ್ಲಿ 196 ಕೊರೊನಾ ಪ್ರಕರಣ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶನಿವಾರ ಬೆಳಗ್ಗೆ 196 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1,939ಕ್ಕೆ ಏರಿಕೆಯಾಗಿದೆ. ಒಟ್ಟು 42 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಎರಡು ಪಾಸಿಟವ್ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ 34 ವರ್ಷದ ಮಹಿಳೆಗೆ ಕೊರೋನಾ‌ ಪಾಸಿಟಿವ್ ದೃಢಪಟ್ಟಿದೆ. ಇವರು ಜ್ವರದಿಂದ ಬಳಲುತ್ತಿದ್ದರು. ಇನ್ನೊಂದು 30 ವರ್ಷದ ಯುವಕನಿಗೆ ಕೊರೋನಾ ಪಾಸಿಟಿವ್‌ ಬಂದಿದೆ. ಇವರು ಮಹಾರಾಷ್ಟ್ರದಿಂದ ಬಂದು ಕ್ವಾರೈಂಟೈನ್ ನಲ್ಲಿದ್ದರು.

ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಬಂದ 34 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.

ಭಾನುವಾರ ಸಂಪೂರ್ಣ ಲಾಕ್ ಡೌನ್

ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯ ವರೆಗೆ ರಾಜ್ಯ ಸರಕಾರ ಆದೇಶದಂತೆ ಸಂಪೂರ್ಣ ಲಾಕ್ ಡೌನ್ ಇದ್ದು ಈ ವೇಳೆ ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡಲು ಅವಕಾಶವಿಲ್ಲ.

ಈ ಅವಧಿಯಲ್ಲಿ ಅಗತ್ಯ ವಸ್ತುಗಳಾದ ಪತ್ರಿಕೆ, ಹಾಲು, ತರಕಾರಿ, ಔಷಧ ಪೂರೈಕೆ/ಖರೀದಿಗೆ ಯಾವುದೇ ನಿರ್ಬಂಧವಿರುವುದಿಲ್ಲ. ಆದರೆ ಇತರ ಎಲ್ಲ ಅಂಗಡಿ ಮುಂಗಟ್ಟುಗಳು, ಹೊಟೇಲ್ ಗಳು ಮುಚ್ಚಿರುತ್ತವೆ. ಅಲ್ಲದೆ ಎಲ್ಲಾ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಭಾನುವಾರ ಕೆಲವು ಮದುವೆ ಕಾರ್ಯಕ್ರಮಗಳು ಫಿಕ್ಸ್ ಆಗಿದ್ದು, ಇದಕ್ಕೆ ಅವಕಾಶ ನೀಡಲಾಗಿದೆ. ಮದುವೆ ಕಾರ್ಯಕ್ರಮದ ಪ್ರಯುಕ್ತ ಸಂಚರಿಸುವ ವಾಹನಗಳಿಗೆ ಸ್ಥಳೀಯಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ರಾಜ್ಯದಲ್ಲಿ 6, 7, 8ನೇ ತರಗತಿಗಳು ಇಂದಿನಿಂದ ಪುನರಾರಂಭ

Harshitha Harish

ಕರಾವಳಿಯ ಕೆಲವೆಡೆ ದಿಢೀರ್‌ ಮಳೆ; ಕೃಷಿ ಬೆಳೆಗಳಿಗೆ ಹಾನಿ

Upayuktha

ಕೋವಿಡ್ 19 ಸುದ್ದಿ ಮುಖ್ಯಾಂಶಗಳು: ಒಟ್ಟು ಸೋಂಕಿತರ ಸಂಖ್ಯೆ 18,985ಕ್ಕೆ; ಸಾವಿನ ಸಂಖ್ಯೆ 603ಕ್ಕೆ ಏರಿಕೆ

Upayuktha