ಪ್ರಮುಖ ರಾಜ್ಯ

ರಾಜ್ಯದಲ್ಲಿಂದು ಒಟ್ಟು 67 ಹೊಸ ಕೊರೊನಾ ಕೇಸ್

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಬುಧವಾರ ಸಂಜೆಯ ಬುಲೆಟಿನ್ ನಲ್ಲಿ 67 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1462ಕ್ಕೆ ಏರಿಕೆಯಾಗಿದೆ. ಒಟ್ಟು 40 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಒಂದು ಕೊರೊನಾ ಪ್ರಕರಣ ವರದಿಯಾಗಿದೆ. ಬೆಂಗಳೂರಿನಿಂದ ಕುಡುಪು ನಡುಮನೆಗೆ ಬಂದಿದ್ದ 40 ವರ್ಷ ಪ್ರಾಯದ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕುಡುಪು ನಡುಮನೆ ಹಾಗೂ ಅವರು ಉಳಿದುಕೊಂಡಿದ್ದ ನೀರುಮಾರ್ಗದ ಕುಟ್ಟಿಕ್ಕಳ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.

ಮೂವರು ಡಿಸ್ಚಾರ್ಜ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮೂವರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಬೋಳೂರಿನ ಇಬ್ಬರು ಹಾಗೂ ಬಂಟ್ವಾಳದ ಒಬ್ಬರು ಬಿಡುಗಡೆಯಾಗಿದ್ದಾರೆ.

ಉಡುಪಿಯಲ್ಲಿ ಮತ್ತೆ ಆರು ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ. ಇವರೆಲ್ಲರೂ ಮುಂಬೈಯಿಂದ ಬಂದು ಕ್ವಾರಂಟೈನ್ ನಲ್ಲಿದ್ದರು. ಈ ಮೂಲಕ ಉಡುಪಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಕೇರಳದಲ್ಲಿ ಬುಧವಾರ 24 ಕೊರೊನಾ ಪಾಸಿಟಿವ್ ವರದಿಯಾಗಿದೆ. ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಒಂದು ಪಾಸಿಟಿವ್ ವರದಿ ಬಂದಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಯಕ್ಷಗಾನಕ್ಕೆ ಸಿಕ್ತು ಗ್ರೀನ್ ಸಿಗ್ನಲ್- ನವೆಂಬರ್ ಅಂತ್ಯಕ್ಕೆ ಜಿಲ್ಲೆಯಾದ್ಯಂತ ಮೇಳಗಳ ತಿರುಗಾಟ ಪ್ರಾರಂಭ

Upayuktha

ರೇಡಿಯೋ ಜಾಕಿ ರಶ್ಮಿ ಉಳ್ಳಾಲ್ ಗೆ ‘ಹೃದಯವಂತ’ ಪ್ರಶಸ್ತಿ

Upayuktha

ಹಿರಿಯ ಸಂಸ್ಕೃತ ವಿದ್ವಾಂಸ, ನಿವೃತ್ತ ಪ್ರಾಧ್ಯಾಪಕ ಡಾ. ಈ ಮಹಾಬಲ ಭಟ್ಟ ನಿಧನ

Upayuktha