ಪ್ರಮುಖ ರಾಜ್ಯ

ದ.ಕ., ಕಾಸರಗೋಡು ಜಿಲ್ಲೆಯಲ್ಲಿ ಎರಡು, ಉಡುಪಿಯಲ್ಲಿ ಒಂದು ಕೊರೊನಾ ಪಾಸಿಟಿವ್

ರಾಜ್ಯದಲ್ಲಿ ದಾಖಲೆಯ 99 ಮಂದಿಗೆ ಪಾಸಿಟಿವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಬಂಟ್ವಾಳದ 68 ವರ್ಷ ಪ್ರಾಯದ ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಮಹಾರಾಷ್ಟ್ರದಿಂದ ಮಂಗಳೂರಿಗೆ ಬಂದು ಕ್ವಾರಂಟೈನ್ ನಲ್ಲಿದ್ದ ಬಂಟ್ವಾಳ ಕರೋಪಾಡಿಯ ನಿವಾಸಿ 30 ವರ್ಷ ಪ್ರಾಯದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಇನ್ನೊಬ್ಬರು ಯೆಯ್ಯಾಡಿ ಬಾರೆಬೈಲ್ ನಿವಾಸಿ 55 ವರ್ಷ ಪ್ರಾಯದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ಅವರ ಸೋಂಕಿನ ಮೂಲ ನಿಗೂಢವಾಗಿದೆ. ಯೆಯ್ಯಾಡಿ ಬಾರೆಬೈಲ್ ಪರಿಸರ ಕಂಟೈನ್ ಮೆಂಟ್ ವಲಯ ಆಗಲಿದೆ.

ಉಡುಪಿ ಜಿಲ್ಲೆಯಲ್ಲಿ ಸೋಮವಾರ 27 ವರ್ಷ ಪ್ರಾಯದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಇವರು ಬೈಂದೂರು ನಿವಾಸಿಯಾಗಿದ್ದು, ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರು. ಇವರು ಏಳು ತಿಂಗಳ ಗರ್ಭಿಣಿ.

ಕಾಸರಗೋಡು ಜಿಲ್ಲೆಯ ಪೈವಳಿಕೆಯಲ್ಲಿ ಎರಡು ಹೊಸ ಸೋಂಕಿತ ಪ್ರಕರಣ ವರದಿಯಾಗಿದೆ. ಇವರಿಬ್ಬರೂ ಮುಂಬಯಿಂದ ಬಂದವರಾಗಿದ್ದಾರೆ. ಕೇರಳದಲ್ಲಿ ಒಟ್ಟು 29 ಹೊಸ ಪ್ರಕರಣ ವರದಿಯಾಗಿದೆ.

ಕರ್ನಾಟಕ ರಾಜ್ಯದಲ್ಲಿ ಬರೋಬ್ಬರಿ 99 ಪ್ರಕರಣ ದಾಖಲಾಗಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಂದೇ ದಿನದಲ್ಲಿ ಪತ್ತೆಯಾದ ಅತಿ ಹೆಚ್ಚಿನ ಸಂಖ್ಯೆ ಇದಾಗಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಮಂಗಳೂರು ಶಾಸಕ ಯು.ಟಿ ಖಾದರ್ ವಿರುದ್ಧ ದೇಶದ್ರೋಹದ ಕೇಸು

Upayuktha

ಕೋವಿಡ್ 19 ತಾಜಾ ಅಪ್‌ಡೇಟ್ಸ್‌: ದ.ಕ. 11, ಉಡುಪಿ 9 ಕೊರೊನಾ ಪಾಸಿಟಿವ್ ಪ್ರಕರಣಗಳು

Upayuktha

ಧರ್ಮಸ್ಥಳ: ಡಾ.ಹೆಗ್ಗಡೆಯವರ 73ನೇ ಹುಟ್ಟು ಹಬ್ಬ; 7,300 ಮಂದಿಗೆ ‘ವಾತ್ಸಲ್ಯ’ ಸಹಾಯಹಸ್ತ ವಿತರಣೆ

Upayuktha