ಜಿಲ್ಲಾ ಸುದ್ದಿಗಳು ಪ್ರಮುಖ

ದಕ್ಷಿಣ ಕನ್ನಡದಲ್ಲಿ 2, ಉಡುಪಿಯಲ್ಲಿ 22 ಹೊಸ ಕೊರೊನಾ ಪ್ರಕರಣ

ಮಂಗಳೂರು: ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5 ಗಂಟೆ ನಡುವಣ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ನೆರೆಯ ಉಡುಪಿ ಜಿಲ್ಲೆಯಲ್ಲಿ 22 ಮಂದಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ರಾಜ್ಯದಾದ್ಯಂತ ಒಟ್ಟು 204 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಇಂದು ಪತ್ತೆಯಾದ ಪ್ರಕರಣಗಳ ಪೈಕಿ, 157 ಮಂದಿ ಬೇರೆ ರಾಜ್ಯಗಳಿಂದ ಬಂದವರಾಗಿದ್ದಾರೆ.

ಯಾದಗಿರಿಯಲ್ಲಿ ಅತಿಹೆಚ್ಚು, ಅಂದರೆ 66 ಹೊಸ ಪ್ರಕರಣಗಳು ದೃಢಪಟ್ಟಿವೆ. ಉಳಿದಂತೆ, ಬೆಂಗಳೂರು ನಗರದಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 15, ಬೀದರ್‌ನಲ್ಲಿ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9, ಕೋಲಾರದಲ್ಲಿ 6, ಮೈಸೂರು, ರಾಮನಗರದಲ್ಲಿ ತಲಾ 5, ವಿಜಯಪುರದಲ್ಲಿ 4, ಬಾಗಲಕೋಟೆ, ಉತ್ತರಕನ್ನಡದಲ್ಲಿ ತಲಾ 3, ಹಾಸನ, ಧಾರವಾಡದಲ್ಲಿ ತಲಾ 2, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು ಮತ್ತು ಕೊಪ್ಪಳದಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ಸೋಂಕಿನಿಂದಾಗಿ ಈವರೆಗೆ 72 ಮಂದಿ ಮೃತಪಟ್ಟಿದ್ದಾರೆ. ಸದ್ಯ 3,195 ಸಕ್ರಿಯ ಪ್ರಕರಣಗಳಿವೆ. ಒಟ್ಟಾರೆಯಾಗಿ ಈವರೆಗೆ 2,976 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇಂದು 114 ಜನ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 10 ಮಂದಿ ತೀವ್ರನಿಗಾ ಘಟಕಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣಯಲ್ಲಿ ತಿಳಿಸಲಾಗಿದೆ.

ಕೇರಳದಲ್ಲಿ ಇಂದು 83 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2244 ಕ್ಕೇರಿದೆ. ಕಾಸರಗೋಡು ಜಿಲ್ಲೆಯಲ್ಲಿ ಇಂದು 10 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

ಟೆಲಿಗ್ರಾಂ ಬ್ರಾಡ್‌ಕಾಸ್ಟ್‌ ಮೂಲಕ ಉಪಯುಕ್ತ ನ್ಯೂಸ್‌ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ.

Related posts

ಜೆಇಇ ಅಡ್ವಾನ್ಸ್‌ಡ್‌ ಪರೀಕ್ಷೆ ಆಗಸ್ಟ್ 23ಕ್ಕೆ: ಎಚ್‌ಆರ್‌ಡಿ ಸಚಿವರ ಪ್ರಕಟಣೆ

Upayuktha

ಮೋದಿಯನ್ನು ರಾಕ್ಷಸನಂತೆ ಬಿಂಬಿಸುವುದು ತಪ್ಪು ಎಂದ ಜೈರಾಮ್‌ ರಮೇಶ್‌ಗೆ ಸಿಂಘ್ವಿ, ತರೂರ್ ಬೆಂಬಲ

Upayuktha

ಸಿಇಟಿ 2020: ಅತ್ಯುತ್ತಮ ಸಾಧನೆ ಮಾಡಿದ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

Upayuktha