
ಹೊಸದಿಲ್ಲಿ: ಖ್ಯಾತ ಸ್ಪಿನ್ ಬೌಲರ್ ಯಜುವೇಂದ್ರ ಚಹಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನೃತ್ಯ ಸಂಯೋಜಕಿ ಧನಶ್ರೀ ವರ್ಮ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಘೋಷಿಸಿದ್ದಾರೆ. ಜತೆಗೆ ಇಬ್ಬರು ಜತೆಗಿರುವ ಫೋಟೊವೊಂದನ್ನು ಪ್ರಕಟಿಸಿದ್ದಾರೆ.
ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಧನಶ್ರೀ ವರ್ಮ ತಮ್ಮದೇ ಆದ ನೃತ್ಯ ಸಂಸ್ಥೆಯೊಂದನ್ನು ನಡೆಸುತ್ತಿದ್ದಾರೆ. ವೈದ್ಯೆಯಾಗಿರುವ ಧನಶ್ರೀ ಯೂ ಟ್ಯೂಬ್ ಮೂಲಕವೂ ಜನಪ್ರಿಯರಾಗಿದ್ದಾರೆ. ಚಹಲ್-ಧನಶ್ರೀ ಜೋಡಿಗೆ ಹಾಲಿ ಕ್ರಿಕೆಟಿಗರು, ಮಾಜಿ ಕ್ರಿಕೆಟಿಗರು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಶುಭ ಹಾರೈಸಿದ್ದಾರೆ. ಮದುವೆ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.
ಮುಂದೆ ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್)ನಲ್ಲಿ ನಡೆಯಲಿರುವ ಐಪಿಎಲ್ ಟಿ20 ಕೂಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚಹಲ್ ಪ್ರತಿನಿಧಿಸಲಿದ್ದಾರೆ. 30 ವರ್ಷದ ಚಹಲ್ ಭಾರತದ ತಂಡದ ಪರ 52 ಏಕದಿನ, 42 ಟಿ20 ಪಂದ್ಯವನ್ನಾಡಿದ್ದಾರೆ, ಎರಡು ಮಾದರಿ ಸೇರಿ ಒಟ್ಟು 146 ವಿಕೆಟ್ ಕಬಳಿಸಿದ್ದಾರೆ. ಸೆ.19ರಿಂದ ಐಪಿಎಲ್ ಆರಂಭವಾಗಲಿದೆ. ನ.10ಕ್ಕೆ ತೆರೆ ಬೀಳಲಿದೆ. ಒಟ್ಟು 53 ದಿನಗಳ ಐಪಿಎಲ್ ಗೆ ವಿದೇಶದಲ್ಲಿ ವೇದಿಕೆ ಸಿದ್ಧವಾಗಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್ App ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.