ಅಪರಾಧ ಜಿಲ್ಲಾ ಸುದ್ದಿಗಳು

ಬೆಳಗಾವಿ ಡಿಸಿ ಮನೆಯ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣು


ಬೆಳಗಾವಿ: ಜಿಲ್ಲಾಧಿಕಾರಿಗಳ ಮನೆಯ ಗಾರ್ಡ್ ಇಂದು ಮುಂಜಾನೆ ತಮ್ಮ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಇಂದು ಮುಂಜಾನೆ ಘಟನೆ ನಡೆದಿದ್ದು, ಪ್ರಕಾಶ್ ಗುರುವಯ್ಯನವರ ಎಂಬ ಸಿಬ್ಬಂದಿಯೇ ಆತ್ಮಹತ್ಯೆಗೆ ಶರಣಾದವರಾಗಿದ್ದು, ಇವರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನಿವಾಸಿಯಾಗಿದ್ದಾರೆ.

ಎಸ್ ಎಲ್ ಆರ್ ಬಂದೂಕಿನಿಂದ ಗಂಡು ಹಾರಿಸಿಕೊಂಡು ಸಿಬ್ಬಂದಿ ಗುಂಡು ಹಾರಿಸಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಪೊಲೀಸ್ ಕಮಿಷನರ್ ಲೋಕೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡಿಸಿ ಎಸ್.ಬಿ. ಬೊಮ್ಮನಹಳ್ಳಿ ಸೇರಿದಂತೆ ಮನೆಯಲ್ಲಿ ಕೆಲಸ ಮಾಡುವವರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಚಾಮರಾಜನಗರ : ಬರ್ಡ್ ಫೆಸ್ಟಿವಲ್ ಜನವರಿ 5 ರಿಂದ 7 ರವರೆಗೆ

Harshitha Harish

ಇಲ್ಲಿಯ ವಿದ್ಯಾರ್ಥಿಗಳಿಗೆ ಕಾಡುವ ನೆಟ್ವರ್ಕ್ ಸಮಸ್ಯೆ

Harshitha Harish

ಅನ್‌ಲೈನ್‌ನಲ್ಲಿ ಉಚಿತ ಉದ್ಯೋಗ್ ಆಧಾರ್ ಕೈಗಾರಿಕಾ ನೋಂದಣಿ

Upayuktha