ಜಿಲ್ಲಾ ಸುದ್ದಿಗಳು

ಪ್ರತಿಯೊಬ್ಬರಿಗೂ ತಂತ್ರಜ್ಞಾನದ ಸುರಕ್ಷತೆಯ ಅರಿವು ಅತ್ಯವಶ್ಯಕ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ

ಮಂಗಳೂರು: ದೈನಂದಿನ ಆಡಳಿತ ಕಾರ್ಯದಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆ ದಿನೇ ದಿನೇ ಹೆಚ್ಚಾಗಿ ಬಳಕೆ ಮಾಡುತ್ತಿದ್ದೇವೆ. ಅವುಗಳ ಸುರಕ್ಷತೆಯ ಬಗ್ಗೆ ಅರಿವು ಹೊಂದುವುದು ಸಹ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದರು.

ಅವರು ಇಂದು ನಗರದ ತಮ್ಮ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಸಾಮರ್ಥ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಇ-ಆಡಳಿತ ಸಂಸ್ಥೆ, ಮೈಸೂರು ಹಾಗೂ ಇ-ಆಡಳಿತ ಕೇಂದ್ರ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ “ಸೈಬರ್ ಸೆಕ್ಯುರಿಟಿ ಮತ್ತು ಇ- ಆಡಳಿತ ವಿಷಯಗಳ ಕುರಿತು ಜಿಲ್ಲೆಯ ಗ್ರೂಪ್ ’ಎ’ ಅಧಿಕಾರಿಗಳಿಗೆ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಾಹಿತಿ ತಂತ್ರಜ್ಞಾನದ ಬಳಕೆಯಿಂದ ಸರಕಾರಿ ಸೇವೆಗಳು ಹಾಗೂ ಕೆಲಸಗಳನ್ನು ಸುಲಭವಾಗಿ ಹಾಗೂ ಶೀಘ್ರವಾಗಿ ಜನಸಾಮಾನ್ಯರಿಗೆ ಒದಗಿಸಲು ಪೂರಕವಾಗಿವೆ. ಅವುಗಳ ಮಾಹಿತಿಗಳು ಅಂತರ್ಜಾಲದಲ್ಲಿ ಸೋರಿಕೆಯಾಗದಂತೆ ಹಾಗೂ ಅವುಗಳ ದುರುಪಯೋಗವಾಗದಂತೆ ಸುರಕ್ಷಿತ ಕ್ರಮಗಳನ್ನು ಅನುಸರಿಸುವುದು ಅತ್ಯವಶ್ಯಕ ಎಂದರು.

ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರೊಂದಿಗೆ ಸಂವಹನ ಅತ್ಯಂತ ಸುಲಭವಾಗಿದೆ ಸರಕಾರಿ ವೆಬ್‍ಸೈಟ್‍ಗಳನ್ನು ಹ್ಯಾಕರ್‌ಗಳು ಸುಲಭವಾಗಿ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಅವರು ಸೈಬರ್ ಅಪರಾಧಗಳ ಬಗ್ಗೆ ಅರಿವು ಹೊಂದಿದಾಗ ತಮಗಾದ ಮೋಸದ ಬಗ್ಗೆ ದೂರು ನೀಡಿ ನ್ಯಾಯ ಪಡೆಯಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಸರಕಾರಿ ಅಧಿಕಾರಿಗಳು ಇ-ಆಡಳಿತವನ್ನು ಸರಿಯಾಗಿ ಬಳಸುವುದರೊಂದಿಗೆ ತಮ್ಮ ಇಲಾಖೆಯ ಕೆಲಸಗಳನ್ನು ತಂತ್ರಜ್ಞಾನ ಬಳಸಿಕೊಂಡು ಶೀಘ್ರವಾಗಿ ಮಾಡಬೇಕು ಎಂದ ಅವರು, ಅಧಿಕಾರಿಗಳು ಕಛೇರಿಯ ಕಂಪ್ಯೂಟರ್ ಮತ್ತು ಮೊಬೈಲ್‍ಗಳಲ್ಲಿ ಅಂತರ್ಜಾಲ ಬಳಕೆಯ ಉಪಯೋಗ ಪಡೆದುಕೊಳ್ಳಬೇಕು ಜೊತೆಗೆ ಅದರ ಅನಾನುಕೂಲತೆಗಳ ಬಗ್ಗೆ ಜಾಗೃತೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎನ್.ಐ.ಟಿ.ಕೆ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಆಲ್ವಿನ್ ರೋಷನ್ ಪೈಸ್ ಮಾತನಾಡಿ, ಆನ್‍ಲೈನ್ ವ್ಯವಹಾರ, ಬ್ಯಾಂಕಿಂಗ್ ಉಪಯೋಗಿಸುವಾಗ ಎಚ್ಚರ ವಹಿಸಬೇಕು. ಕೆಲವೊಮ್ಮೆ ಅಪರಿಚಿತ ಮೊಬೈಲ್ ನಂಬರ್‍ಗಳಿಂದ ಕರೆಯನ್ನು ಮಾಡಿ ಉದ್ಯೋಗ ಅಥವಾ ಸಾಲ ನೀಡುವ ಬಗ್ಗೆ ಭರವಸೆ ನೀಡುತ್ತಾರೆ. ಇದರ ಬಗ್ಗೆಯೂ ಅಧಿಕಾರಿಗಳು ಗಮನವಹಿಸಬೇಕು ಹಾಗೂ ಯಾವುದೇ ಮಾಹಿತಿಯನ್ನು ತಕ್ಷಣವೇ ನೀಡಬಾರದು ಎಂದರು.

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್‍ಬುಕ್, ಇನ್ಸ್ಟಾಗ್ರಾಮ್‍ಗಳಂತಹ ತಂತ್ರಜ್ಞಾನಗಳನ್ನು ಉಪಯೋಗಿಸುತ್ತಿದ್ದಾರೆ ಹಾಗೂ ಕ್ರೆಡಿಟ್‍ಕಾರ್ಡ್ ಮತ್ತು ಡೆಬಿಟ್ ಕಾರ್ಡ್‍ಗಳನ್ನು ಉಪಯೋಗಿಸುತ್ತಿದ್ದು, ಅವುಗಳ ಪಾಸ್‍ವರ್ಡ್‍ಗಳನ್ನು ಯಾರ ಬಳಿಯು ಹಂಚಿಕೊಳ್ಳಬಾರದು ಇದರಿಂದ ವಂಚಕರು ಮಾಹಿತಿಯನ್ನು ಕದಿಯುವ ಸಂದರ್ಭಗಳು ಬರುತ್ತವೆ ಎಂದರು.

ಕಾರ್ಯಾಗಾರದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ವೆಂಕಟೇಶ್. ಜಿ, ವಿವಿಧ ಇಲಾಖೆಯ ಗ್ರೂಪ್-ಎ ಅಧಿಕಾರಿಗಳು ಹಾಗೂ ಜಿಲ್ಲಾ ತರಬೇತಿ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಯುವತಿಯರಿಗಾಗಿ ಜೇನುಕೃಷಿ: ಮಾದರಿಯಾಗಿರುವ ಕೊಪ್ಪಳದ ಶಾಹಿನ ಬೇಗಂ

Upayuktha

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್‌: ಸಿಬಿಎಸ್‌ಇ 10ನೇ ತರಗತಿಯಲ್ಲಿ ಶೇ 100 ಫಲಿತಾಂಶ

Upayuktha

ಶಿಕ್ಷಣ ಸಚಿವರಿಂದ ಶಿವಮೊಗ್ಗದ ಸರ್ಕಾರಿ ಸ್ಮಾರ್ಟ್ ಕ್ಲಾಸ್ ವೀಕ್ಷಣೆ

Upayuktha