ಕ್ಯಾಂಪಸ್ ಸುದ್ದಿ ಶಿಕ್ಷಣ

ಯುವ ಸಂಸ್ಕೃತ ವಿದ್ವಾಂಸ ಡಾ. ಪಿ. ವಿನಯಾಚಾರ್ಯ ರವರಿಗೆ ಡಿ.ಲಿಟ್ ಪದವಿ ಪ್ರದಾನ

ಬೆಂಗಳೂರು: ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವೇದಾಂತ ವಿಭಾಗದ ಸಹಾಯಕ ಪ್ರಾಧ್ಯಾಪಕ ಯುವ ಸಂಸ್ಕೃತ ವಿದ್ವಾಂಸ ಡಾ.ಪಿ. ವಿನಯಾಚಾರ್ಯ ರವರಿಗೆ ನಾಗಪುರದ ಕವಿಕುಲಗುರು ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯದವರು ಡಿ.ಲಿಟ್ ಪದವಿ ಪ್ರದಾನ ಮಾಡಿದರು.

ಇತ್ತೀಚೆಗೆ ನಡೆದ 9ನೇ ಘಟಿಕೋತ್ಸವದಲ್ಲಿ ಅವರು ಸಲ್ಲಿಸಿದ ಮಧ್ವಾಚಾರ್ಯರ ಸರ್ವಮೂಲಗ್ರಂಥಗಳಲ್ಲಿ ಒಂದಾದ ‘ಮಿಥ್ಯಾತ್ವ ಅನುಮಾನ ಖಂಡನಂ’ ಕೃತಿಯ ಆಂಗ್ಲ ವ್ಯಾಖ್ಯಾನದ ಪ್ರೌಢ ಪ್ರಬಂಧಕ್ಕೆ ಪ್ರತಿಷ್ಠಿತ ‘ವಿದ್ಯಾವಾಚಸ್ಪತಿ’ ಉಪಾಧಿಯೊಂದಿಗೆ ಡಿ.ಲಿಟ್ ಪದವಿ ಪ್ರದಾನ ಮಾಡಿದೆ ಎಂದು ಕುಲಪತಿ ಡಾ. ಶ್ರೀನಿವಾಸ ವರಖೇಡಿರವರು ತಿಳಿಸಿದ್ದಾರೆ.

ಆನ್‌ಲೈನ್‌ನಲ್ಲಿ ನಡೆದ ಘಟಿಕೋತ್ಸವದಲ್ಲಿ ಮಹಾರಾಷ್ಟ್ರದ ರಾಜ್ಯಪಾಲರು, ಯೋಗ ಗುರು ಬಾಬಾ ರಾಮದೇವ್ ಮೊದಲಾದವರು ಭಾಗವಹಿಸಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಆಳ್ವಾಸ್‌ ಕಾಲೇಜಿನಲ್ಲಿ ವಾರ್ಷಿಕ ಚಿತ್ರಕಲಾ ಪ್ರದರ್ಶನ ‘ಆರ್ಟಿಫೈಸ್’ಗೆ ಚಾಲನೆ

Upayuktha

ಸಾರಿಗೆ ಸಂಸ್ಥೆ ಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Harshitha Harish

ಇಂದಿನ ಐಕಾನ್- ವಿಠ್ಠಲ ಬೇಲಾಡಿ ಎಂಬ ಮಹಾಗುರು

Upayuktha

Leave a Comment